ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲೆ: ಹೊಸ ಸ್ವರೂಪದ ಪ್ರಶ್ನೆಪತ್ರಿಕೆ

Last Updated 3 ನವೆಂಬರ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: 10ನೇ ತರಗತಿಯ ಪ್ರಶ್ನೆಪತ್ರಿಕೆ ಸ್ವರೂಪದಲ್ಲಿ ಬದಲಾವಣೆ ಮಾಡಲಾಗಿದ್ದು, ಇದಕ್ಕೆ ಅನುಗುಣವಾಗಿ8 ಮತ್ತು 9ನೇ ತರಗತಿ ಹಂತದಲ್ಲೂ ಈ ವರ್ಷದಿಂದಲೇ ಪ್ರಶ್ನೆಪತ್ರಿಕೆ ಸ್ವರೂಪ ಬದಲಾಯಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಶಿಕ್ಷಣ ಇಲಾಖೆಯ ಆಯುಕ್ತರು ಈ ನಿಟ್ಟಿನಲ್ಲಿ ಎಲ್ಲಾ ಡಿಡಿಪಿಐಗಳಿಗೆ ಸುತ್ತೋಲೆ ಕಳುಹಿಸಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಈ ಕುರಿತು ಮನವರಿಕೆ ಮಾಡಿ ಈ ವರ್ಷದಿಂದಲೇ ಜಾರಿಗೆ ತರುವಂತೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಈ ನಿರ್ಧಾರದಿಂದಾಗಿ ಮುಂದಿನ ಮಾರ್ಚ್‌ನಲ್ಲಿ ನಡೆಯಲಿರುವ ಪ್ರೌಢಶಾಲಾ ಹಂತದ ಎಲ್ಲಾ ತರಗತಿಗಳಲ್ಲೂ ಹೊಸ ಮಾದರಿಯ ಪ್ರಶ್ನೆ ಪತ್ರಿಕೆಯೇ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT