ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿದಂತೆ
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಆದೇಶಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

"ದೇವರ ಹೆಸರಿನಲ್ಲಿ ಅಕ್ರಮ ಮುಂದುವರಿಸಲು ಅವಕಾಶ ನೀಡುವುದು ಎಷ್ಟರ ಮಟ್ಟಿಗೆ ಸರಿ ಹಾಗೂ ಅಕ್ರಮ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲವೇ" ಎಂದು ಪ್ರಶ್ನಿಸಿದೆ.

ಇದೆ ವೇಳೆ ನ್ಯಾಯಪೀಠ, ಅಕ್ರಮ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲು ಮಾರ್ಚ್ 31ರವರೆಗೆ ಸಮಯ ಬೇಕು ಎಂದು ಕಾಲಾವಕಾಶ ಕೋರಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರವನ್ನು ತಿರಸ್ಕರಿಸಿದೆ.ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿದ ನ್ಯಾಯಪೀಠ ಫೆಬ್ರುವರಿ ನಾಲ್ಕಕ್ಕೆ ವಿಚಾರಣೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.