ಬುಧವಾರ, ಏಪ್ರಿಲ್ 8, 2020
19 °C
ಜ.30ರಂದು ಬೆಂಗಳೂರಿನಲ್ಲಿ 33.4 ಡಿಗ್ರಿ ಉಷ್ಣಾಂಶ

ಬೆಂಗಳೂರಿನಲ್ಲಿ 150 ವರ್ಷಗಳಲ್ಲೇ ಗರಿಷ್ಠ ತಾಪಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಗುರುವಾರ 33.4 ಡಿಗ್ರಿ ತಾಪಮಾನ ದಾಖಲಾಗಿತ್ತು. ಇದು ಬೆಂಗಳೂರಿನಲ್ಲಿ ಜನವರಿಯಲ್ಲಿ ದಾಖಲಾದ ಗರಿಷ್ಠ ತಾಪಮಾನ. ಕಳೆದ ಒಂದೂವರೆ ಶತಮಾನದಲ್ಲಿ ಇಷ್ಟು ತಾಪಮಾನ ಈ ಅವಧಿಯಲ್ಲಿ ದಾಖಲಾಗಿರಲಿಲ್ಲ. 

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನಗರದ ತಾಪಮಾನ ದಾಖಲು ಮಾಡಿಕೊಳ್ಳುತ್ತಿದ್ದ ದಿನದಿಂದ ಈವರೆಗೆ ನಗರದಲ್ಲಿ ಜನವರಿಯಲ್ಲಿ ಯಾವತ್ತೂ ಇಷ್ಟು ಉಷ್ಣಾಂಶ ದಾಖಲಾಗಿರಲಿಲ್ಲ.

32.8 ಡಿಗ್ರಿ: 2000 ಇಸ್ವಿ ಜ.24ರಂದು ದಾಖಲಾಗಿದ್ದ ಗರಿಷ್ಠ ತಾಪಮಾನ

4 ಡಿಗ್ರಿ: 2020ರ ಜ.30 ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲು

ಬೆಚ್ಚನೆಯ ಚಳಿಗಾಲ!

‘ಇದು ಚಳಿಗಾಲದ ತಿಂಗಳಾದರೂ ಈ ವರ್ಷ ಬೆಚ್ಚನೆಯ ಅನುಭವವಾಗುತ್ತಿದೆ. ಸಾಮಾನ್ಯವಾಗಿ ಜನವರಿಯಲ್ಲಿ ತಂಪಾದ ಗಾಳಿ ಬೀಸುತ್ತದೆ. ಆದರೆ, ಈ ವರ್ಷ ಇಂತಹ ಅನುಭವವಾಗಲಿಲ್ಲ’ ಎಂದು ಐಎಂಡಿ ವಿಜ್ಞಾನಿ ಸಿ.ಎಸ್. ಪಾಟೀಲ ಹೇಳುತ್ತಾರೆ.

‘ಮುಂದಿನ ಬೇಸಿಗೆ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ಹೊಂದಿರುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದೂ ಅವರು ಹೇಳುತ್ತಾರೆ.

‍ಫೆಬ್ರುವರಿಯಲ್ಲಿಯೂ ಗರಿಷ್ಠ ತಾಪಮಾನ ?

ಈ ಫೆಬ್ರುವರಿಯ ಕೊನೆಯ ವಾರದಲ್ಲಿ ಗರಿಷ್ಠ 35ರಿಂದ 36 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಇದು ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಹೆಚ್ಚಾಗಿರುತ್ತದೆ ಎಂದು ಐಎಂಡಿ ಮೂಲಗಳು ಹೇಳುತ್ತವೆ.

ಈ ವರ್ಷದ ಕಳೆದ ಕೆಲವು ವಾರಗಳಲ್ಲಿ ರಾಜ್ಯದಲ್ಲಿ ದಾಖಲಾಗಿರುವ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತಲೂ ಹೆಚ್ಚಾಗಿದೆ.
– ಜಿ.ಎಸ್. ಶ್ರೀನಿವಾಸ ರೆಡ್ಡಿ, ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು