ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಕೈದಿಗಳು ಭಾನುವಾರ ಮಧ್ಯಾಹ್ನದ ವೇಳೆಗೆ 16 ಸಾವಿರಕ್ಕೂ ಹೆಚ್ಚಿನ ಮಾಸ್ಕ್‌ಗಳನ್ನು (ಮುಖಗವಸು)ಸಿದ್ಧಪಡಿಸಿ ಗಮನಸೆಳೆದಿದ್ದಾರೆ. ಮಾಸ್ಕ್‌ಗಳ ಕೊರತೆ ನಿವಾರಣೆಗೆ ಕೊಡುಗೆ ನೀಡುತ್ತಿದ್ದಾರೆ.

60 ಮಂದಿ ಕೈದಿಗಳು ವಾರದಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. 45 ಹೊಲಿಗೆ ಯಂತ್ರಗಳನ್ನು ಬಳಸಲಾಗುತ್ತಿದೆ. ಇಲ್ಲಿ ಬಟ್ಟೆಯ ಮಾಸ್ಕ್‌ಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಅವುಗಳನ್ನು ತೊಳೆದು ಮರು ಬಳಕೆ ಮಾಡಬಹುದಾಗಿದೆ.

‘ಸರ್ಕಾರದ ವಿವಿಧ ಇಲಾಖೆಗಳಿಗೆ, ಸಂಘ–ಸಂಸ್ಥೆಗಳಿಗೆ ಮಾಸ್ಕ್ ಮಾರಾಟ ಮಾಡಲಾಗಿದೆ. ₹ 6 ಬೆಲೆ ನಿಗದಿಪಡಿಸಲಾಗಿದೆ. ಅದಕ್ಕೆ ಬೇಕಾಗುವ ಬಟ್ಟೆ ಮೊದಲಾದ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದೆ. ನಿತ್ಯವೂ ಸರಾಸರಿ 2 ಸಾವಿರದಿಂದ 3 ಸಾವಿರ ಮಾಸ್ಕ್‌ಗಳನ್ನು ಸಿದ್ಧಪಡಿಸಲಾಗುತ್ತಿದೆ. ರೆಡ್‌ಕ್ರಾಸ್ ಸಂಸ್ಥೆಯವರು ಕೂಡ 20ಸಾವಿರ ಮಾಸ್ಕ್ ಕೇಳಿದ್ದಾರೆ’ ಎಂದು ಕಾರಾಗೃಹದ ಸೂಪರಿಂಟೆಂಡೆಂಟ್ ಕೃಷ್ಣಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ದಿನಕ್ಕೆ 250 ಮಾಸ್ಕ್‌ಗಳ ನಂತರ ಹೆಚ್ಚುವರಿಯಾಗಿ ಹೊಲಿದರೆ ತಲಾ ಮಾಸ್ಕ್‌ಗೆ ₹ 2 ನೀಡಿ ಕೈದಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.