ಮಂಗಳವಾರ, ಫೆಬ್ರವರಿ 25, 2020
19 °C

‘ಗೆಲುವಿಗಾಗಿ ಒಂದಾದ ಜೋಡೆತ್ತು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕಳೆದ ಮೂರು ಚುನಾವಣೆಗಳಲ್ಲಿ ಪ್ರತಿಸ್ಪರ್ಧಿಗಳಾಗಿದ್ದ ಯು.ಬಿ. ಬಣಕಾರ ಮತ್ತು ನಾನು ಈ ಬಾರಿ ಒಂದಾಗಿದ್ದೇವೆ. ನಾವು ಒಂದಾದ ಮೇಲೆ ಬೇರೆಯವರು ಗೆಲ್ಲುತ್ತಾರೆ ಎಂಬ ಪ್ರಶ್ನೆಯೇ ಬರುವುದಿಲ್ಲ’ ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. 

ಯತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಕ್ಷೇತ್ರದಲ್ಲಿ ‘ಸುನಾಮಿ’ ರೀತಿ ಬದಲಾವಣೆಯಾಗಿದೆ. ಕ್ಷೇತ್ರದ ಜನರು ಪ್ರಜ್ಞಾವಂತರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಮ್ಮ ಕ್ಷೇತ್ರಕ್ಕೆ ₹250 ಕೋಟಿ ಅನುದಾನ ನೀಡಿದ್ದಾರೆ. ಸರ್ವಜ್ಞ ಏತ ನೀರಾವರಿ ಯೋಜನೆಗೆ ಅನುಮೋದನೆ ಸಿಕ್ಕಿದೆ. ರಾಜ್ಯದಲ್ಲಿ ಸ್ಥಿರ ಮತ್ತು ಸುಭದ್ರ ಸರ್ಕಾರ ಬೇಕಿದೆ. ಈ ಎಲ್ಲ ಕಾರಣಗಳಿಂದ ಜನರು ನನ್ನನ್ನು ಗೆಲ್ಲಿಸುತ್ತಾರೆ. 40 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ’ ಎಂದು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು