ಲೋಕಪಾಲ ಜಾರಿಗೆ ಹಿರೇಮಠ ಆಗ್ರಹ

7

ಲೋಕಪಾಲ ಜಾರಿಗೆ ಹಿರೇಮಠ ಆಗ್ರಹ

Published:
Updated:

ಶಿವಮೊಗ್ಗ: ಸುಪ್ರಿಂಕೋರ್ಟ್‌ ನಿರ್ದೇಶನದಂತೆ ಕೇಂದ್ರ ಸರ್ಕಾರ ತಕ್ಷಣವೇ ಲೋಕಪಾಲ ನೇಮಿಸಬೇಕು. ಹಣಕಾಸು ಅವ್ಯವಹಾರದಲ್ಲಿ ಭಾಗಿಯಾಗಿರುವ ಸಿಬಿಐ ನಿರ್ದೇಶಕರನ್ನು ಬದಲಿಸಬೇಕು ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ ಎಸ್‌.ಆರ್. ಹಿರೇಮಠ ಒತ್ತಾಯಿಸಿದರು.

ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ತಿದ್ದುಪಡಿ ಹಿಂಪಡೆಯಬೇಕು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಜನಾರ್ದನ ರೆಡ್ಡಿ ಮತ್ತು ಅವರ ಸಂಗಡಿಗರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು. ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಯುತ್ತಿರುವ ಅಕ್ರಮ ಕಲ್ಲುಗಾರಿಕೆ, ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಮಲೆನಾಡಿನಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಡೆಸುತ್ತಿರುವ ಸಮಾಜ ಸೇವಕರಿಗೆ ಕಿರುಕುಳ ನೀಡಲಾಗುತ್ತಿದೆ. ಅವರಿಗೆ ರಕ್ಷಣೆ ನೀಡಬೇಕು. ಪಶ್ಚಿಮಘಟ್ಟ ಪ್ರದೇಶದ ಹೊಸನಗರ ತಾಲ್ಲೂಕಿನಲ್ಲಿ ಗಣಿಗಾರಿಕೆ ಪರಿಸರ ಸೂಕ್ಷ್ಮ ವಲಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಪಶ್ಚಿಮಘಟ್ಟದ ಜೀವ ಸಂಕುಲ ನಾಶದತ್ತ ಸಾಗಿದೆ. ಜಿಲ್ಲೆಯ 11 ಸಾವಿರ ಎಕರೆ ಮೀಸಲು ಅರಣ್ಯ ಭೂಮಾಲೀಕರಿಗೆ ಹಂಚಿಕೆಯಾಗಿದೆ ಎಂದು ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !