ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚತಾರಾ ಹೋಟೆಲ್‌ ವಶಕ್ಕೆ ತೆಗೆದುಕೊಳ್ಳುವಂತೆ ಬಿಎಸ್‌ವೈಗೆ ಎಚ್‌.ಕೆ.ಪಾಟೀಲ ಪತ್ರ

ಕೋವಿಡ್‌ ಚಿಕಿತ್ಸೆ
Last Updated 26 ಜೂನ್ 2020, 7:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿರುವ ಪಂಚತಾರಾ ಮತ್ತು ತ್ರಿತಾರಾಹೋಟೆಲ್‌ಗಳನ್ನು ಸರ್ಕಾರಿ ಆದೇಶ ಅಥವಾ ಸುಗ್ರೀವಾಜ್ಞೆ ಮೂಲಕ ವಶಕ್ಕೆ ತೆಗೆದುಕೊಂಡು ಕೋವಿಡ್‌ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಬೇಕು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್‌.ಕೆ.ಪಾಟೀಲ ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳೆಲ್ಲವೂ ಭರ್ತಿಯಾಗಿವೆ ಎಂಬ ಮಾಹಿತಿ ಇದೆ. ಇದು ಬೆಂಗಳೂರು ಮಾತ್ರವಲ್ಲ ರಾಜ್ಯದ ಇತರೆಡೆಗಳಲ್ಲಿಯೂ ಸಹ ಇದೇ ಸನ್ನಿವೇಶ ಎದುರಾಗಿದೆ. ಈಗ ಲಭ್ಯವಿರುವ ಹಾಸಿಗೆಗಳಿಗಿಂತ 10 ಪಟ್ಟು ಹೆಚ್ಚಿಗೆ ಹಾಸಿಗೆಗಳನ್ನು ಸಿದ್ದಪಡಿಸಿಕೊಳ್ಳುವ ಅನಿವಾರ್ಯತೆ ಇದೆ. ಹಾಸಿಗೆಗಳನ್ನು ಸಿದ್ಧಪಡಿಸುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಸರ್ಕಾರ ನಿಗದಿ ಮಾಡಿರುವ ದರವನ್ನು ಒಪ್ಪಿಕೊಂಡಿಲ್ಲ. ಇಂಥ ತುರ್ತು, ಅನಿವಾರ್ಯ, ಗಂಭೀರ ಪರಿಸ್ಥಿತಿಯ ಸಂದರ್ಭದಲ್ಲಿ ಸಂಘರ್ಷಕ್ಕೆ ಕಾಲವಲ್ಲ. ತಕ್ಷಣವೇ ಭಾರತೀಯ ವೈದ್ಯ ಸಂಘ ಜತೆಗೆ ಸಭೆ ಏರ್ಪಡಿಸಿ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳನ್ನು ಕರೆದು ತಕ್ಷಣವೇ ಬಗೆಹರಿಸಿ ಬಿಡಬೇಕು. ಇಲ್ಲದಿದ್ದರೆ, ಗಂಡಾಂತರಕಾರಿ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಪಾಟೀಲ ಹೇಳಿದ್ದಾರೆ.

ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ಜವಾಬ್ದಾರಿಗಳನ್ನು ನಿರ್ವಹಿಸುವ ಸಂದರ್ಭದಲ್ಲಿ ಸರ್ಕಾರ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಮತ್ತು ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ತೆಗೆದುಕೊಳ್ಳಬೇಕು. ಇಂದಿನ ಗಂಭೀರ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿ ಸರ್ಕಾರ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸಿ ಹಲವಾರು ಪತ್ರಗಳನ್ನು ನಾನು ಸರ್ಕಾರಕ್ಕೆ ಈ ಹಿಂದೆಯೇ ಬರೆದಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT