ಮಂಗಳವಾರ, ಫೆಬ್ರವರಿ 18, 2020
28 °C

ಅಪಘಾತದಲ್ಲಿ ಅಶೋಕ್ ಪುತ್ರನ ಬಗ್ಗೆ ಮಾಹಿತಿ ಇಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಬಳ್ಳಾರಿ ಅಪಘಾತದಲ್ಲಿ ಇಬ್ವರು ಸಾವನ್ಬಪ್ಪಿದ ಘಟನೆ ಬಗ್ಗೆ ಮಾಹಿತಿ ಇದ್ದು, ಅದರಲ್ಲಿ ಸಚಿವ ಆರ್.ಅಶೋಕ ಅವರ ಪುತ್ರ ವಾಹನ ಚಲಾಯಿಸುತ್ತಿದ್ದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಗಂಗಾವತಿಗೆ ಖಾಸಗಿ ಕಾರ್ಯಕ್ರಮದಲ್ಲಿ ತೆರಳುವ ಉದ್ದೇಶದಿಂದ ಕೊಪ್ಪಳದಲ್ಲಿ ಮಾತನಾಡಿದರು.
ಕಾರು ಅಪಘಾತದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

6 ಸಾವಿರ ಜನಸ್ನೇಹಿ ಪೊಲೀಸರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪೊಲೀಸ್ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಕೃಷ್ಣಾ ಬಿ ಸ್ಕೀಂ ಯೋಜನೆಯ ಕುರಿತು ಕಾಂಗ್ರೆಸ್ ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾಜಿ ಸಚಿವ ಬಸವರಾಜ ರಾಯರಡ್ಡಿ ಹೇಳಿಕೆಗೆ ಅಷ್ಟೊಂದು ಮಹತ್ವವಿಲ್ಲ. ಅವರ ಸರ್ಕಾರವಿದ್ದಾಗ ಎಲ್ಲ ಸಾಧ್ಯ. ಈಗ ಇಲ್ಲವೆಂದರೆ ಹೇಗೆ ಎಂದರೆ ಹೇಗೆ. ಇದು ಅವರ ನಿಲುವು ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ಸರೋಜಿನಿ ಮಹಿಷಿ ವರದಿ ಅನುಷ್ಠಾನ ಕುರಿತು ತೀವ್ರವಾದ ಚರ್ಚೆ ನಡೆಯುತ್ತಿದೆ. ಸರ್ಕಾರ ವರದಿ ಜಾರಿಗೆ ಗಂಭೀರ ಪ್ರಯತ್ನ ನಡೆಸುವುದಾಗಿ ತಿಳಿಸಿದರು. ಸಂಸದ ಸಂಗಣ್ಣ ಕರಡಿ ಸಚಿವರನ್ನು ಸ್ವಾಗತಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು