ಬುಧವಾರ, ಆಗಸ್ಟ್ 12, 2020
21 °C

'ಯಯಾತಿ' ಓದುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ವಾರಂಟೈನ್‌ಗೆ ಒಳಗಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುವಿನ ವೇಳೆಯಲ್ಲಿ ಕಥೆ ಕಾದಂಬರಿ ಓದುತ್ತಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಗೃಹಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಪರಿಣಾಮ ಮುಖ್ಯಮಂತ್ರಿ ಕ್ವಾರಂಟೈನ್‌ಗೆ ಒಳಗಾಗಿದ್ದು, ಬಿಡುವಿನ ವೇಳೆಯಲ್ಲಿ ನನಗೆ ಅತ್ಯಂತ ಪ್ರಿಯವಾದ ಕಾಲಕ್ಷೇಪವೆಂದರೆ ಓದುವುದು. ನೂರಾರು ಸಂಗತಿಗಳ ಬಗ್ಗೆ ತಿಳಿದಷ್ಟೂ ತಿಳಿಯಬಹುದಾದ ವಿಷಯಗಳಿವೆ, ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ. ಇಂದಿನ ಭಾನುವಾರದ ಲಾಕ್ ಡೌನ್ ಮತ್ತು ಸ್ವ-ಕ್ವಾರಂಟೈನ್‌‌ನಲ್ಲಿರುವ ವೇಳೆ ಸಿಕ್ಕ ಸ್ವಲ್ಪ ಬಿಡುವಿನ ಸಮಯವನ್ನು ಖಾಂಡೇಕರ್ ಅವರ ಯಯಾತಿಯ ಜೊತೆಗೆ ಕಳೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು