ಗುರುವಾರ , ಏಪ್ರಿಲ್ 15, 2021
19 °C

ಹನಿಟ್ರ್ಯಾಪ್‌ನಲ್ಲಿರುವ ದನಿ ಸಾಹುಕಾರ್‌ದಿದ್ದಂತಿದೆ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಅನರ್ಹ ಶಾಸಕರ ಹನಿಟ್ರ್ಯಾಪ್‌ ಪ್ರಕರಣದಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ವ್ಯಕ್ತಿಯ ದನಿ ಸಾಹುಕಾರ್‌ದಿದ್ದಂತಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆಯೂ ಸಿಬಿಐ ತನಿಖೆಗೆ ವಹಿಸುವುದು ಒಳ್ಳೆಯದು. ಚಾರಿತ್ರ್ಯವಧೆ ಮಾಡುತ್ತಿದ್ದಾರೋ ಅಥವಾ ಅದರಲ್ಲಿ ಸತ್ಯಾಂಶ ಇದೆಯೋ ಎನ್ನುವುದನ್ನು ಜನರಿಗೆ ಗೊತ್ತು ಮಾಡಿಸಬೇಕು’ ಎಂದು ಒತ್ತಾಯಿಸಿದರು.

‘ಮಹಿಳೆಯರ ಬಗ್ಗೆ ಗೌರವವಿಲ್ಲದೇ, ಬಹಳ ಅಶ್ಲೀಲವಾಗಿ ಮಾತನಾಡಿರುವುದು ಆಡಿಯೊದಲ್ಲಿದೆ. ಅಂಥವರನ್ನು ಬಿಜೆಪಿಯವರು ಚುನವಣೆಯಲ್ಲಿ ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ. ರಾಜ್ಯದ ಜನರು ಇದನ್ನು ಅರಿತುಕೊಳ್ಳಬೇಕು’ ಎಂದರು.

ಯಾವ ಸಾಹುಕಾರ್‌ ಎನ್ನುವುದನ್ನು ಅವರು ಸ್ಪಷ್ಟವಾಗಿ ಹೇಳಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು