ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪದ್ಯಾಪಿ ಠಾಕ್ರೆ: ಬಸವರಾಜ ಹೊರಟ್ಟಿ ಟೀಕೆ

Last Updated 28 ಡಿಸೆಂಬರ್ 2019, 15:45 IST
ಅಕ್ಷರ ಗಾತ್ರ

ಬೆಳಗಾವಿ: ‘ಪದೇ ಪದೇ ಗಡಿ ವಿವಾದ ಕೆಣಕುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಲ್ಲ, ಉಪದ್ಯಾಪಿ ಠಾಕ್ರೆ’ ಎಂದು ಜೆಡಿಎಸ್‌ ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಟೀಕಿಸಿದ್ದಾರೆ.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಡಿ ವಿಚಾರದಲ್ಲಿ ಕರ್ನಾಟಕ ಮಹಾರಾಷ್ಟ್ರಕ್ಕಿಂತ ಒಂದು ಹೆಜ್ಜೆ ಮುಂದಿಡಬೇಕು’ ಎಂದು ಒತ್ತಾಯಿಸಿದರು.

‘ಬೆಳಗಾವಿಯ ಸಂಸದರು ಗಡಿ ವಿಚಾರದಲ್ಲಿ ಮಾತನಾಡುವುದಿಲ್ಲ. ಅದರಲ್ಲಿ ಅವರ ಸ್ವಾರ್ಥವಿದೆ. ಲಾಭಕ್ಕೆ ತೊಂದರೆಯಾಗುತ್ತದೆ ಎನ್ನುವುದು ಅವರ ಉದ್ದೇಶವಾಗಿದೆ. ಮಹದಾಯಿ ನದಿ ವಿವಾದವಿರಲಿ, ಗಡಿ ವಿವಾದವಿರಲಿ ಎಲ್ಲರೂ ರಾಜ್ಯದ ಹಿತ ಕಾಯಬೇಕು. ರಾಜ್ಯ ಸರ್ಕಾರವು ಇಬ್ಬರು ಸಚಿವರನ್ನು ನೇಮಿಸಿ ಗಡಿ ರಕ್ಷಣೆಗೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT