ಶನಿವಾರ, ಫೆಬ್ರವರಿ 22, 2020
19 °C

ಹೊಸಕೋಟೆ ನಗರಸಭೆ ಚುನಾವಣೆ: ಬಿಜೆಪಿ ಮೇಲುಗೈ, 7 ಮಂದಿ ಶರತ್‌ ಬೆಂಬಲಿಗರಿಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಹೊಸಕೋಟೆ ನಗರಸಭೆಯ 31 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. 

ನಗರಸಭೆಯ 31 ವಾರ್ಡ್‌ಗಳ ಪೈಕಿ 27 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 22 ವಾರ್ಡ್‌ಗಳಲ್ಲಿ ಗೆದ್ದಿದೆ. ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರ 7 ಮಂದಿ ಬೆಂಬಲಿಗರೂ ನಗರಸಭೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನುಳಿದಂತೆ ಎಸ್‌ಡಿಪಿಐ ಒಂದು, ಪಕ್ಷೇತರ ಅಭ್ಯರ್ಥಿಯೊಬ್ಬರು ಜಯ ಸಾಧಿಸಿದ್ದಾರೆ.   ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಿದೆ. 

ಇನ್ನು ನಾಲ್ಕು ವಾರ್ಡ್‌ಗಳ ಫಲಿತಾಂಶ ಬಾಕಿ ಉಳಿದಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು