ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ: ವೃದ್ಧೆ ಸಾವು

7

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ: ವೃದ್ಧೆ ಸಾವು

Published:
Updated:
Deccan Herald

ದೊಡ್ಡಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದ ವೃದ್ಧೆಯನ್ನು ಆಸ್ಪತ್ರೆಯ ಎದುರಿನ ಚಿಕ್ಕಬಳ್ಳಾಪುರ- ಮುಖ್ಯರಸ್ತೆಯಲ್ಲಿ ನಾಲ್ಕು ದಿನಗಳ ಹಿಂದೆ ಬಿಟ್ಟು ಹೋಗಿದ್ದು, ಅವರು ಶನಿವಾರ ರಸ್ತೆಯ ಬದಿಯಲ್ಲೇ ನರಳಿ ಸಾವನ್ನಪ್ಪಿದ್ದಾರೆ.

ಮೃತರನ್ನು ತಾಲ್ಲೂಕಿನ ನೇರಳೆಘಟ್ಟ ಗ್ರಾಮದ ನಿವಾಸಿ ಕಾಂತಮ್ಮ (65) ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಕಾಯಿಲೆಯಿಂದ ನರಳುತ್ತಿರುವಾಗ ಅವರನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

‘ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಅವರನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಯಾರೂ ಬಾರದ ಕಾರಣ ಈ ಪ್ರಕರಣ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ‘ವೃದ್ಧೆಯನ್ನು ನೋಡಿಕೊಳ್ಳಲು, ಗಲೀಜು ಮಾಡಿಕೊಂಡಾಗ ಸ್ವಚ್ಛ ಮಾಡುವವರು ಯಾರೂ ಇಲ್ಲ ಎಂಬ ಕಾರಣಕ್ಕೆ ಸಿಬ್ಬಂದಿ ಅವರನ್ನು ಆಸ್ಪತ್ರೆ ಹೊರವಲಯದ ಚರಂಡಿ ಪಕ್ಕದಲ್ಲಿ ಮಲಗಿಸಿ ತೆರಳಿದ್ದರು. ರಸ್ತೆ ಬದಿಯಲ್ಲಿದ್ದು ಬಿಸಿಲು, ಚಳಿ, ಗಾಳಿಗೆ ತೀವ್ರವಾಗಿ ನರಳಿ ಅವರು ಅಸುನೀಗಿದ್ದಾರೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ಇಲ್ಲ: ‘ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೃದ್ಧೆ ಮನೆಗೆ ತೆರಳುವುದಾಗಿ ತಿಳಿಸಿದ್ದರು. ವೃದ್ಧೆಯನ್ನು ರಸ್ತೆಬದಿಯಲ್ಲಿ ಬಿಟ್ಟದ್ದು ತಿಳಿದಿಲ್ಲ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ತಿಳಿಸಿದ್ದಾರೆ.

ತಹಶೀಲ್ದಾರ್ ಬಿ.ಎ.ಮೋಹನ್ ಮಾತನಾಡಿ, ‘ಇದು ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ. ಘಟನೆಗೆ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.

ಕರವೇ ಪ್ರತಿಭಟನೆ: ಪ್ರಕರಣ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆ ಮತ್ತು ತಾಲ್ಲೂಕು, ಜಿಲ್ಲಾ ವೈದ್ಯಾಧಿಕಾರಿ ವಿರುದ್ಧ ಕೂಡಲೇತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 3

  Sad
 • 0

  Frustrated
 • 0

  Angry

Comments:

0 comments

Write the first review for this !