ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ ಅಂತ್ಯಕ್ಕೆ ಉಳಿದ ಮನೆ ಹಸ್ತಾಂತರ

ಡಿಜಿಟಲ್‌ ಗ್ರಂಥಾಲಯ ಉದ್ಘಾಟಿಸಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿಕೆ
Last Updated 5 ಜೂನ್ 2020, 20:15 IST
ಅಕ್ಷರ ಗಾತ್ರ

ಮಡಿಕೇರಿ: ‘ರಾಜೀವ್‌ ಗಾಂಧಿ ವಸತಿ ನಿಗಮದಿಂದ 250 ಮನೆಗಳು ಹಾಗೂ ಇನ್ಫೊಸಿಸ್‌ ಪ್ರತಿಷ್ಠಾನವು ನಿರ್ಮಿಸುತ್ತಿರುವ 200 ಮನೆಗಳನ್ನು ಇದೇ ಡಿಸೆಂಬರ್‌ ಅಂತ್ಯಕ್ಕೆ ವಿತರಣೆ ಮಾಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ‘ಈಗಾಗಲೇ ಜಿಲ್ಲೆಗೆ ಎನ್‌ಡಿಆರ್‌ಎಫ್‌ ತಂಡವು ಆಗಮಿಸಿದೆ. ತಂಡವು ಪೂರ್ವ ತಯಾರಿ ಮಾಡಿಕೊಳ್ಳುತ್ತಿದೆ. 500 ಮನೆಗಳನ್ನು ಹಸ್ತಾಂತರಿಸಲಾಗಿದೆ. ಒಟ್ಟು 950 ಮನೆಗಳನ್ನು ಸಂತ್ರಸ್ತರಿಗೆ ನೀಡಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಸಹಕಾರ ಅಗತ್ಯ: ಲಾಕ್‌ಡೌನ್‌ ಸಡಿಲಿಕೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಜನರ ಸಹಕಾರ ಅಗತ್ಯ. ಎರಡು ತಿಂಗಳಿಂದ ಕೊರೊನಾ ಸೋಂಕಿನಿಂದ ಬಹಳಷ್ಟು ಸಮಸ್ಯೆಯಾಗಿದೆ. ಮಾಸ್ಕ್‌ ಹಾಕಿಕೊಳ್ಳಬೇಕು. ಅಂತರ ಕಾಯ್ದುಕೊಳ್ಳಬೇಕು. ತೊಂದರೆಯಾದ ಪ್ರದೇಶದಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗಿದೆ. ಯಾವುದೇ ಭೀತಿಯಿಲ್ಲದ ಕಡೆಗಳಲ್ಲಿ ಲಾಕ್‌ಡೌನ್‌ ಸಡಿಲಿಕೆ ಆಗುತ್ತಿದೆ ಎಂದು ಹೇಳಿದರು.

ಉದ್ಘಾಟನೆ: ಜಿಲ್ಲಾ ಕೇಂದ್ರ ಮಡಿಕೇರಿಯ ಕೈಗಾರಿಕಾ ಬಡಾವಣೆಯ ಮಹಾತ್ಮ ಗಾಂಧಿ ಜಿಲ್ಲಾ ಕೇಂದ್ರ ಗ್ರಂಥಾಲಯ ಆಧುನೀಕರಣ ಕಟ್ಟಡವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ಸಾರ್ವಜನಿಕರಿಗೆ ಸಮರ್ಪಿಸಿದರು. ಹಾಗೆಯೇ ಜಿಲ್ಲೆಯಲ್ಲಿ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯಕ್ಕೆ ತಮ್ಮ ಹೆಸರು ನೋಂದಾಯಿಸಿ ಚಾಲನೆ ನೀಡಿದರು.

‘ಗ್ರಂಥಾಲಯದ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು’ ಎಂದು ಕರೆ ನೀಡಿದರು.

‘ಭೌಗೋಳಿಕವಾಗಿ ಮನುಷ್ಯ, ಪ್ರಾಣಿ, ಪಕ್ಷಿ ಸೇರಿದಂತೆ ಜಲಚರವೆಲ್ಲವೂ ವಾಸ ಮಾಡಬೇಕು. ಹಾಗಾದಾಗ ಭೌಗೋಳಿಕವಾಗಿ ಸಮತೋಲನ ಕಾಣಲು ಸಾಧ್ಯ’ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸದ ಪ್ರತಾಪಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ ಕುಮಾರ್ ಎಸ್.ಹೊಸಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್, ಚಂದ್ರಶೇಖರ್, ಲೀಲಾವತಿ, ಪ್ರಮುಖರಾದ ಪ್ರಕಾಶ್ ಆಚಾರ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT