ವಸತಿ ಯೋಜನೆ ಅಡಿಯಲ್ಲಿ 4 ಲಕ್ಷ ಮನೆ ನಿರ್ಮಾಣ

7

ವಸತಿ ಯೋಜನೆ ಅಡಿಯಲ್ಲಿ 4 ಲಕ್ಷ ಮನೆ ನಿರ್ಮಾಣ

Published:
Updated:
Prajavani

ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಸುಮಾರು 4 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ.

ಅಲ್ಲದೇ, ಬಿಬಿಎಂಪಿಯ ಎಸ್‌ಸಿಎಸ್‌ಪಿ/ ಟಿಎಸ್‌ಪಿ ಯೋಜನೆ ಅಡಿಯಲ್ಲಿ ₹300 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚಾಗಿ ವಾಸಿಸುತ್ತಿರುವ  ಕೊಳಗೇರಿ ಪ್ರದೇಶಗಳ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. 

ಸಾರಥಿಯ ಸೂರು: ಬೆಂಗಳೂರಿನ ಆಟೋಚಾಲಕರು ಹಾಗೂ ಟ್ಯಾಕ್ಸಿ ಚಾಲಕರಿಗೆ ₹50 ಕೋಟಿ ವೆಚ್ಚದಲ್ಲಿ ‘ಸಾರಥಿಯ ಸೂರು’ ಹೆಸರಿನಲ್ಲಿ ಬಾಡಿಗೆ ವಸತಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಘೋಷಿಸಲಾಗಿದೆ. ಅದೇ ರೀತಿ, ಸಿದ್ಧ ಉಡುಪು ಕಾರ್ಮಿಕರಿಗೆ ಬಾಡಿಗೆ ಆಧಾರದ ವಸತಿ ಯೋಜನೆಗೆ ₹50 ಕೋಟಿ ಅನುದಾನ ನೀಡಲಾಗಿದೆ.  ಇದಲ್ಲದೇ, ಮತ್ಸ್ಯಾಶ್ರಯ ಯೋಜನೆ ಅಡಿಯಲ್ಲಿ 2,500 ಮನೆ ನಿರ್ಮಾಣ ಮಾಡಲು ಪ್ರಸ್ತಾಪಿಸಲಾಗಿದೆ.

ಅಂಕಿಅಂಶ

* ₹1,500 ಕೋಟಿ 2019–20ನೇ ಸಾಲಿನಲ್ಲಿ ವಸತಿ ಯೋಜನೆಗೆ ಹೆಚ್ಚುವರಿ ಅನುದಾನ

* ₹4,676 ಕೋಟಿ ವಸತಿ ಯೋಜನೆಗೆ ಮೀಸಲಿಡಲಾದ ಒಟ್ಟು ಅನುದಾನ 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !