ಸೋಮವಾರ, ಮಾರ್ಚ್ 30, 2020
19 °C
ಸಬೆ ನಡೆಸಿಯೇ ತೀರುತ್ತೇವೆ; ನಡೆಸಲು ಬಿಡುವುದಿಲ್ಲ

ಮೂರುಸಾವಿರ ಮಠ ಮುಂದುವರಿದ ಸಭೆ ಗೊಂದಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮೂರುಸಾವಿರ ಮಠದ ಆವರಣದಲ್ಲಿ ಫೆ.23 ರಂದು ಕರೆದಿರುವ ಸತ್ಯ ದರ್ಶನ ಸಭೆಯನ್ನು ನಡೆಸಿಯೇ ತೀರುವುದಾಗಿ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದರೆ, ಸಭೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಮಠದ ಉನ್ನತ ಸಮಿತಿ ಸಂಚಾಲಕ ಮೋಹನ ಲಿಂಬಿಕಾಯಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲೇಹೂಸೂರಿನ ದಿಂಗಾಲೇಶ್ವರ ಸ್ವಾಮೀಜಿ, ‘ಸಭೆ ನಡೆಸುವ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಸಭೆ ತಡೆದರೆ ಅಹಿತಕರ ಘಟನೆಗೆ ಕಾರಣ ಆಗಬಹುದು’ ಎಂದು ಎಚ್ಚರಿಸಿದರು.

 ‘ಮೂರುಸಾವಿರ ಮಠದ ಉತ್ತರಾಧಿಕಾರಿ ವಿವಾದ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಮಾತನಾಡಿದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಸಭೆಗೆ ನನಗೆ ಆಹ್ವಾನ ನೀಡಿಲ್ಲ’ ಎಂದು ಮಠದ ಉನ್ನತ ಸಮಿತಿ ಸದಸ್ಯ ಜಗದೀಶ ಶೆಟ್ಟರ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು