ಗುರುವಾರ , ಫೆಬ್ರವರಿ 20, 2020
28 °C
ಜ.30ರಂದು ಮಹಾ ಸಂಕಲ್ಪ ದಿನ ಆಚರಣೆಗೆ ನಿರ್ಧಾರ

ದೇಶದಲ್ಲಿ ಖಾಸಗಿ ಸೇನೆಯಿಂದ ಹಿಂಸಾಚಾರ: ಸಾಹಿತಿ ಡಾ.ಕೆ. ಮರುಳಸಿದ್ದಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇಶದಲ್ಲಿ ಖಾಸಗಿ ಸೇನೆಯು ಹಿಂಸೆಗೆ ಇಳಿಯುತ್ತಿದೆ. ಇಂತಹ ಸಂಘಟನೆಗಳಿಗೆ ಕೇಂದ್ರ ಸರ್ಕಾರದ ಕುಮ್ಮಕ್ಕೂ ಇದೆ’ ಎಂದು ಹಿರಿಯ ಸಾಹಿತಿ ಡಾ. ಕೆ. ಮರುಳಸಿದ್ದಪ್ಪ ಹೇಳಿದರು. 

‘ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ. ಐದು ವರ್ಷಗಳಲ್ಲಿ ಹಿಂಸಾಚಾರದಂತಹ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆಲ್ಲ ಖಾಸಗಿ ಸೇನೆಯೇ ಕಾರಣವಾಗಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು. 

ಸಾಹಿತಿ ಡಾ.ಕೆ.ಶರೀಫಾ, ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವವರನ್ನು ಕೊಲೆ ಮಾಡಲಾಗುತ್ತಿದೆ. ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಇಂತಹ ದುರಂತಗಳು ನಡೆಯುತ್ತಿವೆ’ ಎಂದರು. 

ಕವಯತ್ರಿ ಡಾ. ಸುಕನ್ಯಾ, ‘ಹೊರಗಡೆಯಿಂದ ಮಾಂಸ ಖರೀದಿಸಲೂ ಆತಂಕ ಪಡಬೇಕಾದ ಸ್ಥಿತಿ ದೇಶದಲ್ಲಿದೆ. ಕ್ಷುಲ್ಲಕ ಕಾರಣಕ್ಕಾಗಿ ಯಾರು ನಮ್ಮ ಮೇಲೆ ದಾಳಿ ನಡೆಸುತ್ತಾರೋ ಎನ್ನುವ ಭಯ ಕಾಡುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು