ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಗೆ ಎಚ್‌.ವಿಶ್ವನಾಥ್‌?

7

ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆಗೆ ಎಚ್‌.ವಿಶ್ವನಾಥ್‌?

Published:
Updated:

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ವಹಿಸಿಕೊಳ್ಳುವಂತೆ ಹಿರಿಯ ನಾಯಕ ಹಾಗೂ ಶಾಸಕ ಎಚ್‌.ವಿಶ್ವನಾಥ್‌ ಅವರನ್ನು ಪಕ್ಷದ ವರಿಷ್ಠರು ಮನವೊಲಿಸುತ್ತಿದ್ದಾರೆ.

ಆಷಾಢ ಮುಗಿದ ಬಳಿಕ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಅವರ ಸಾರಥ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಲೋಕಸಭೆ ಚುನಾವಣೆ ಎದುರಿಸಲು ಜೆಡಿಎಸ್‌ ವರಿಷ್ಠರು ತೀರ್ಮಾನಿಸಿದ್ದಾರೆ. ಅದಕ್ಕೆ ವಿಶ್ವನಾಥ್‌ ಅವರೇ ಸೂಕ್ತ ಎಂಬ ಚರ್ಚೆ ನಡೆದಿದೆ. ಆದರೆ, ವಿಶ್ವನಾಥ್‌ ಈ ಬಗ್ಗೆ ಆಸಕ್ತಿ ತೋರಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಪಕ್ಷ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ರಾಜ್ಯ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು, ಅಧ್ಯಕ್ಷ ಹುದ್ದೆಗೆ ವಿಶ್ವನಾಥ್ ಅವರನ್ನು ನೇಮಿಸಲು ಬಯಸಿದ್ದಾರೆ. ಈ ಬಗ್ಗೆ ಭಾನುವಾರ ಪಕ್ಷದ ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯರ ಸಭೆಯಲ್ಲಿ ಈ ಕುರಿತು ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಜೆಡಿಎಸ್‌ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಇನ್ನೂ ಪ್ರಭಾವಿ ಆಗಿದ್ದಾರೆ. ಅವರನ್ನು ಎದುರಿಸುವುದರ ಜೊತೆಗೆ ಹಿಂದುಳಿದ ವರ್ಗಗಳ ಮತಗಳನ್ನು ಸೆಳೆಯಲು ವಿಶ್ವನಾಥ್ ಅವರೇ ಸೂಕ್ತ ಎಂಬುದು ದೇವೇಗೌಡರ ಚಿಂತನೆ. ಅಂತಿಮವಾಗಿ ವಿಶ್ವನಾಥ್‌ ಅವರ ಮನವೊಲಿಸಿ, ಅವರಿಗೇ ಅಧ್ಯಕ್ಷ ಪಟ್ಟ ಕಟ್ಟುವುದು ನಿಶ್ಚಿತ ಎಂದು ಮೂಲಗಳು ಹೇಳಿವೆ.

ಆಷಾಢದ ನಂತರ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು. ಹಾಲಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಮೂರರಿಂದ ನಾಲ್ಕು ಮಂದಿ ಕಾರ್ಯಾಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ.

 

 

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !