ಮಂಗಳವಾರ, ಮಾರ್ಚ್ 2, 2021
31 °C

ವೇಣುಗೋಪಾಲ್ ಕರೆದ ಸಭೆಗೆ ನಾನು ಹೋಗಲ್ಲ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ ಹಾಗೂ ಜಾರಕಿಹೊಳಿ ಸೋದರರ ನಡುವೆ ಎದ್ದಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪಕ್ಷದ ಹಿರಿಯ ಮುಖಂಡರು ಬೆಂಗಳೂರಿನಲ್ಲಿ ಇವತ್ತು (ಶನಿವಾರ) ಕರೆದಿರುವ ಸಭೆಗೆ ಶಾಸಕ ಸತೀಶ ಜಾರಕಿಹೊಳಿ ಹೋಗದಿರಲು ನಿರ್ಧರಿಸಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಭೆ ಆಯೋಜಿಸಿದ್ದಾರೆ.

'ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳು ಇರುವ ಕಾರಣ, ಬೆಂಗಳೂರಿಗೆ ಹೋಗಿಲ್ಲ' ಎಂದು ಸತೀಶ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ಈ ಸಭೆಗೆ ಸಹೋದರ, ಸಚಿವ ರಮೇಶ ಜಾರಕಿಹೊಳಿ ಹೋಗುವುದಾಗಿ ತಿಳಿಸಿದ್ದಾರೆ. ಅವರು ಭಾಗವಹಿಸುತ್ತಾರೆ' ಎಂದು ಹೇಳಿದರು.

ಎಪಿಎಂಸಿ ಹಾಗೂ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಲಕ್ಷ್ಮಿ ಹಾಗೂ ಜಾರಕಿಹೊಳಿ ಸಹೋದರರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು