ಶುಕ್ರವಾರ, ಡಿಸೆಂಬರ್ 6, 2019
18 °C

ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಚ್ಛೆ ಇಲ್ಲ: ಎಚ್.ಡಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: 'ನನಗೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಇಚ್ಛೆ ಇಲ್ಲ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ನಮ್ಮವರು, ಕಾಂಗ್ರೆಸ್‌ನ ಯಾರೊಬ್ಬರು ಮಾತಮಾಡಲಿಲ್ಲ. ರೈತರ ₹ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ₹ 19 ಸಾವಿರ‌ ಕೋಟಿ‌ ಕೊಟ್ಟಿದ್ದೆ ಎಂದರು.

ಉಪ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಬಹುದು. ಡಿಸೆಂಬರ್ 9ರ ನಂತರ ಎಲ್ಲವೂ ಗೊತ್ತಾಗುತ್ತದೆ. ಅಪ್ಪ ಮಕ್ಕಳ‌ ಪಕ್ಷವನ್ನು ಮನೆಗೆ ಕಳಿಸುವುದಾಗಿ ಹೇಳಿದ್ದ ಎಲ್ಲರೂ ಮನೆಗೆ ಹೋಗಿದ್ದಾರೆ. ರಮೇಶ್ ಜಾರಕಿಹೊಳಿ ಸಹ ಮನೆಗೆ ಹೋಗುತ್ತಾರೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು