ಸೋಮವಾರ, ಏಪ್ರಿಲ್ 6, 2020
19 °C

ಸಿಎಂ ವಿರುದ್ಧ ಅನಾಮಧೇಯ ಪತ್ರ ಬರೆದವರು ಯಾರೆಂದು ಗೊತ್ತು:ಎಂ.ಪಿ.ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಡಳಿತ ಕಾರ್ಯವೈಖರಿ ಬಗ್ಗೆ ಅನಾಮಧೇಯವಾಗಿ ಪತ್ರ ಬರೆದವರು ಯಾರು ಎಂಬುದು ಗೊತ್ತಿದೆ’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

‘ಬಿಜೆಪಿ ಶಾಸಕರು ಹಾಗೂ ಪಕ್ಷದ ಯಾವ ಕಾರ್ಯಕರ್ತರೂ ಪತ್ರ ಬರೆದಿಲ್ಲ. ಕೆಲವರು ಹತಾಶರಾಗಿ, ಮಾನಸಿಕ ಅತೃಪ್ತರು ಅಧಿಕಾರದ ಹುಚ್ಚತನದಿಂದ ಪತ್ರ ಬರೆದಿದ್ದಾರೆ. ಸಮಯಬಂದಾಗ ಅವರ ಹೆಸರು ಬಹಿರಂಗಪಡಿಸಲಾಗುವುದು’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪತ್ರ ಬರೆದವರನ್ನು ರಾಜಕೀಯವಾಗಿ ಎದುರಿಸುವ ಶಕ್ತಿ ಇದೆ. ಧೈರ್ಯ ಇದ್ದರೆ ನೇರವಾಗಿ ಪತ್ರ ಬರೆಯಬೇಕು. ರಾಜಕೀಯವಾಗಿ ಹೋರಾಟ ನಡೆಸುವಂತೆ ಹೇಳಿದ್ದೇನೆ’ ಎಂದು ಹೇಳಿದರು.

‘ಬಿಜೆಪಿಯ 32 ಶಾಸಕರು ರಾಜೀನಾಮೆ ಕೊಡುತ್ತಾರೆ’ ಎಂದು ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಇಬ್ರಾಹಿಂ ಒಬ್ಬ ಜೋಕರ್. ಹಾಗಾಗಿ ಇಂತಹ ಹೇಳಿಕೆ ನೀಡುತ್ತಿರುತ್ತಾರೆ. ಇಬ್ರಾಹಿಂ ಅವರ ಮಾತಿಗೆ ಮಹತ್ವ ಕೊಡಬೇಕಾಗಿಲ್ಲ. ಬಾಯಿ ಚಪಲಕ್ಕೆ ಅವರು ಮಾತನಾಡುತ್ತಾರೆ’ ಎಂದು ಟೀಕಿಸಿದರು.

ಬಿ.ಎಸ್‌. ಯಡಿಯೂರಪ್ಪ ಅವರ ಹುಟ್ಟುಹಬ್ಬ ಆಚರಣೆ ಮೂಲಕ ಶಕ್ತಿ ಪ್ರದರ್ಶನ ಮಾಡುತ್ತಿಲ್ಲ. ಇದು ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಪಕ್ಷಾತೀತವಾಗಿ, ಜಾತ್ಯತೀತವಾಗಿ ನಡೆಯಲಿದೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು