ಬೆಂಗಳೂರು:'ಚುನಾವಣೆ ಫಲಿತಾಂಶದಿಂದ ಸಹಜವಾಗಿ ರಾಹುಲ್ ಗಾಂಧಿ ಅವರಿಗೆಬೇಸರವಾಗಿದೆ. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರ ನಿರ್ಧಾರ ನಮಗೆ ಆಘಾತ ತಂದಿದೆ’ ಎಂದು ಡಿಸಿಎಂ ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು.

ಸುದ್ದಿಗಾರರ ಜತೆ ಗುರುವಾರಮಾತನಾಡಿದ ಅವರು, 'ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾರ್ಯಕಾರಿಣಿ ಸಭೆ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೊ ಕಾದು ನೋಡಬೇಕು.ನಾನುಮುಂದಿನ ವಾರ ದೆಹಲಿಗೆ ಹೋಗಿ ರಾಹುಲ್ ಅವರನ್ನುಭೇಟಿ ಮಾಡ್ತೇನೆ' ಎಂದರು.

'ರಾಜೀನಾಮೆ ನೀಡಿರುವ ಶಾಸಕ ಆನಂದ್ ಸಿಂಗ್ ಅವರನ್ನುಸಂಪರ್ಕಿಸುವ ಪ್ರಯತ್ನ ಮಾಡಿಲ್ಲ. ಒಂದು ಹಂತದವರೆಗೆ ಮನವೊಲಿಸಬಹುದು. ಅದನ್ನು ದಾಟಿದ ಮೇಲೆ ಅವರ ನಿರ್ಧಾರ ಅವರಿಗೆ ಬಿಟ್ಟಿದ್ದು' ಎಂದು ಹೇಳಿದರು.

’ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕಪ್ರವಾಸ ಮುಗಿಸಿ ಬಂದ ಬಳಿಕ ಜೆಡಿಎಸ್ ಕಾಂಗ್ರೆಸ್ ಶಾಸಕರೊಂದಿಗೆ ಚರ್ಚೆ ನಡೆಸುತ್ತೇವೆ. ಈ ಹಿಂದೆ ಜೆಡಿಎಸ್–ಕಾಂಗ್ರೆಸ್ ಜಂಟಿ ಶಾಸಕಾಂಗ ಸಭೆ ನಡೆಸುವ ಬಗ್ಗೆ ತೀರ್ಮಾನಿಸಿದ್ದೆವು. ಆದರೆ, ಸಿಎಲ್‌ಪಿಯಲ್ಲಿ ಶಾಸಕರು ತಮ್ಮ ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳೋಕೆ ಆಗಲ್ಲ. ಹಾಗಾಗಿ ಪ್ರತ್ಯೇಕವಾಗಿ ಮಾತುಕತೆ ನಡೆಸುತ್ತೇವೆ’ ಎಂದರು.

ರಿವರ್ಸ್ ಆಪರೇಷನ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್.‘ಈ ವಿಷಯವನ್ನುಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರನ್ನೇ ಕೇಳಿ. ಗುಂಡುರಾವ್ ಅವರು ಕೆಪಿಸಿಸಿ ಅಧ್ಯಕ್ಷರಲ್ವಾ. ಅವರು ಹೇಳಿದರೆ ಒಂದು ರೀತಿಯ ಅರ್ಥ ಇರುತ್ತೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.