ಶನಿವಾರ, ಫೆಬ್ರವರಿ 22, 2020
19 °C

‘ಬೆಳಗಾವಿಗೆ ಹೋಗ್ತೀನಿ, ಏನಾಗುತ್ತದೆ ನೋಡೋಣ’: ಸಂಜಯ್ ರಾವುತ್ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ ಅವರನ್ನು ಕರ್ನಾಟಕದ ಪೊಲೀಸರು ವಶಕ್ಕೆ ಪಡೆದಿದ್ದನ್ನು ಆ ರಾಜ್ಯದ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕರ್ನಾಟಕ ಪೊಲೀಸರು ರಾಜೇಂದ್ರ ಅವರ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ. ತಳ್ಳಾಡಿದ್ದಾರೆ. ಹುತಾತ್ಮರ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಅವರನ್ನು ತಡೆಯಲಾಗಿದೆ. ಮಹಾರಾಷ್ಟ್ರ ಬಿಜೆಪಿ ಘಟಕಕ್ಕೆ ಇದನ್ನು ಖಂಡಿಸುವ ಧೈರ್ಯವಿದೆಯೇ? ನಾಳೆ (ಜನವರಿ 18) ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗುತ್ತೇನೆ; ಏನಾಗುತ್ತದೆಯೋ ನೋಡೋಣ’ ಎಂದು ಸವಾಲು ಹಾಕಿದ್ದಾರೆ.

ಎಂಇಎಸ್ ಮುಖಂಡರು ಆಯೋಜಿಸಿರುವ ಸನ್ಮಾನ ಕಾರ್ಯಕ್ರಮಕ್ಕೆ ಸಂಜಯ್ ರಾವುತ್ ಅವರನ್ನು ಆಹ್ವಾನಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು