ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನ ತ್ಯಾಗದ ಪ್ರಶ್ನೆಯೇ ಇಲ್ಲ: ಸಚಿವೆ ಶಶಿಕಲಾ ಜೊಲ್ಲೆ

Last Updated 19 ಡಿಸೆಂಬರ್ 2019, 19:52 IST
ಅಕ್ಷರ ಗಾತ್ರ

ಬೆಳಗಾವಿ: ‘ನಾನು ಸಚಿವ ಸ್ಥಾನ ತ್ಯಾಗ ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸಾಂಬ್ರಾ ವಿಮಾನನಿಲ್ದಾಣದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಸಚಿವ ಸಂಪುಟದಲ್ಲಿರುವವರಿಗೆ ತೊಂದರೆಯಾಗದಂತೆ ಪಕ್ಷದ ವರಿಷ್ಠರು ನೋಡಿಕೊಳ್ಳಲಿದ್ದಾರೆ ಎನ್ನುವ ವಿಶ್ವಾಸವಿದೆ’ ಎಂದರು‌.

‘ಸಚಿವ ಸ್ಥಾನ ತೊರೆಯಬೇಕು ಎಂದು ಪಕ್ಷದ ಮುಖಂಡರಾರೂ ನನಗೆ ತಿಳಿಸಿಲ್ಲ. ಮಹಿಳೆಯಾಗಿ ನನಗೆ ಸಿಕ್ಕಿರುವ ಅವಕಾಶವನ್ನು ಮೂರು ವರ್ಷವೂ ಪರಿಣಾಮಕಾರಿ ಬಳಸಿಕೊಳ್ಳುತ್ತೇನೆ. ಇಲಾಖೆಯಲ್ಲಿ ಅಮೂಲಾಗ್ರ ಬದಲಾವಣೆ ತರುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT