ಭಾನುವಾರ, ಆಗಸ್ಟ್ 1, 2021
27 °C

ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಭೂ ಮಾಪನಾ ಇಲಾಖೆಗೆ ಹರ್ಷ ಗುಪ್ತ ಆಯುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರು ಐಎಎಸ್‌ ಹಾಗೂ ಒಬ್ಬರು ಐಎಫ್‌ಎಸ್‌ ಅಧಿಕಾರಿಯನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. 

ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಎನ್‌.ನಾಗಾಂಬಿಕೆ ದೇವಿ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್‌ ಅವರನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಸ್ಥಾನ ನಿರೀಕ್ಷೆಯಲ್ಲಿದ್ದ ಎನ್‌.ಜಯರಾಮ್‌ ಅವರನ್ನು ಜಲಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಹರ್ಷ ಗುಪ್ತ: ಭೂಮಾಪನಾ ಇಲಾಖೆಯ ಆಯುಕ್ತ. ಜತೆಗೆ ಐಎಂಎ ವಿಶೇಷ ಅಧಿಕಾರಿಯಾಗಿಯೂ ಮುಂದುವರಿಕೆ. ಎಚ್‌.ಬಸವರಾಜೇಂದ್ರ– ಪಶುಸಂಗೋಪನಾ ಇಲಾಖೆಯ ಆಯುಕ್ತ, ಡಾ.ಎನ್‌.ಶಿವಶಂಕರ್‌– ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಹೆಚ್ಚುವರಿಯಾಗಿ ಗಣಿ ಇಲಾಖೆಯ ನಿರ್ದೇಶಕ. ಐಎಫ್‌ಎಸ್‌ ಅಧಿಕಾರಿ ಡಾ.ಎಸ್‌.ಎರ್‌.ನಟೇಶ್‌– ಆನೆ ಯೋಜನೆಯ ನಿರ್ದೇಶಕ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು