ಬುಧವಾರ, ಮೇ 27, 2020
27 °C
ಐಎಎಸ್‌, ಐಎಫ್‌ಎಸ್‌ ಅಧಿಕಾರಿಗಳ ವರ್ಗಾವಣೆ

ಸಿಎಂ ಕಾರ್ಯದರ್ಶಿಯಾಗಿ ಗಿರೀಶ್ ಹೊಸೂರ್‌ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಕಾರ್ಯದರ್ಶಿ ಆರ್‌. ವಿಶಾಲ್‌ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಏಜೆನ್ಸಿಯ ಆಯುಕ್ತರಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಫ್‌ಎಸ್‌ ಅಧಿಕಾರಿ ಗಿರೀಶ್ ಸಿ. ಹೊಸೂರ್‌ ಅವರನ್ನು ವಿಶಾಲ್‌ ಅವರ ಜಾಗಕ್ಕೆ ನೇಮಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ. ಅನಿರುದ್ಧ ಶ್ರವಣ್‌ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಆಯುಕ್ತರಾಗಿ ನಿಯೋಜಿಸಲಾಗಿದೆ.

ಉಪ ಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ಕಾರ್ಯದರ್ಶಿ ಪಿ. ಪ್ರದೀಪ್‌ ಅವರನ್ನು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರಿಗೆ ಉಪ ಮುಖ್ಯಮಂತ್ರಿಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಕೆ. ಜ್ಯೋತಿ ಅವರನ್ನು ಖಾಲಿ ಇದ್ದ ಬೆಂಗಳೂರು ವಿಶ್ವವಿದ್ಯಾಲಯದ ರಿಜೆಸ್ಟ್ರಾರ್‌ (ಆಡಳಿತ) ಆಗಿ ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು