ರಾಯಚೂರು: ಪವನ, ಜಲ ಹಾಗೂ ಸೌರ ವಿದ್ಯುತ್ ಮೂಲಗಳಿಂದ ನಿರೀಕ್ಷೆ ಮೀರಿ ವಿದ್ಯುತ್ ಉತ್ಪಾದನೆ ಆಗುತ್ತಿರುವುದರಿಂದ ಸದ್ಯಕ್ಕೆ ವಿದ್ಯುತ್ ಶಾಖೋತ್ಪನ್ನ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲಾಗಿದೆ ಎಂದು ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರನಾಯಕ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂಗಾರು ಉತ್ತಮವಾಗಿರುವುದರಿಂದ ರಾಜ್ಯದಲ್ಲಿ ಸಾಂಪ್ರದಾಯಿಕವಲ್ಲದ ಮೂಲಗಳಿಂದ ಪ್ರತಿದಿನ ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗುತ್ತಿದೆ. ಈ ಕಾರಣದಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಆರ್‌ಟಿಪಿಎಸ್), ಯರಮರಸ್ ಸೂಪರ್ ಕ್ರಿಟಿಕಲ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ಹಾಗೂ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ಬಿಟಿಪಿಎಸ್)ಗಳಲ್ಲಿ ವಿದ್ಯುತ್ ಉತ್ಪಾದನೆ ಕುಗ್ಗಿಸಲಾಗಿದೆ ಎಂದು ತಿಳಿಸಿದರು. ಕಲ್ಲಿದ್ದಲು ಕೊರತೆಯಾಗುವ ಅನಿಶ್ಚಿತತೆ ಇದೆ. ಅಸಾಂಪ್ರದಾಯಿಕ ವಿದ್ಯುತ್ ಮೂಲಗಳ ಉತ್ಪಾದನೆ ಸ್ಥಿರವಾಗಿ ಇರುವುದಿಲ್ಲ. ಹೀಗಾಗಿ ಕಲ್ಲಿದ್ದಲು ದಾಸ್ತಾನು ಮಾಡಿಕೊಳ್ಳಲಾಗುವುದು ಎಂದರು.

‘ಸದ್ಯ ರಾಜ್ಯದಲ್ಲಿ ವಿವಿಧ ವಲಯಗಳಿಂದ ಆರು ಸಾವಿರ ಮೆಗಾವಾಟ್ ವಿದ್ಯುತ್‌ಗೆ ಬೇಡಿಕೆ ಇದೆ’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.