ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಗೆ ಒಳಗಾಗದ ತಬ್ಲೀಗ್‌ಗಳ ಪತ್ತೆಗೆ ನಳಿಲ್ ಕುಮಾರ್ ಕಟೀಲ್ ಆಗ್ರಹ

Last Updated 24 ಏಪ್ರಿಲ್ 2020, 20:06 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯ ತಬ್ಲೀಗ್ ಜಮಾತ್‌ನಲ್ಲಿ ಭಾಗವಹಿಸಿ ಇನ್ನೂ ಪರೀಕ್ಷೆಗೆ ಒಳಗಾಗದವರು ಸಾಕಷ್ಟು ಜನ ಇದ್ದು ಅವರನ್ನು ಪತ್ತೆ ಮಾಡಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಅವರು ಈ ಸಂಬಂಧ ಮನವಿ ಪತ್ರವನ್ನು ಸಲ್ಲಿಸಿದರು.

ಪಾದರಾಯನಪುರದ ಗಲಾಟೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಅಶಾಂತಿಗೆ ಕಾರಣರಾದ ಶಾಸಕ ಜಮೀರ್‌ ಅಹಮದ್‌ ಅವರ ಮೇಲೆ ಮೊಕದ್ದಮೆ ದಾಖಲಿಸಬೇಕು ಎಂದೂ ಅವರು ಒತ್ತಾಯಿಸಿದರು.

ಕೋವಿಡ್‌ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಎಲ್ಲ ರೀತಿಯ ರಕ್ಷಣೆಯನ್ನು ನೀಡಬೇಕು. ಆಶಾ ಕಾರ್ಯಕರ್ತೆಯರು, ನರ್ಸ್‌ಗಳು, ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಗೌರವ ಧನ ನೀಡಬೇಕು. ಪಿಪಿಇ, ಥರ್ಮೋಮೀಟರ್‌ ಸೇರಿದಂತೆ ಎಲ್ಲ ಸೌಲಭ್ಯಗಳನ್ನೂ ನೀಡಬೇಕು ಎಂದು ಸಲಹೆ ನೀಡಿದರು.

ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಉದ್ಯಮಗಳನ್ನು ಅಂತರ ಕಾಯ್ದುಕೊಂಡು ಆರಂಭಿಸಬೇಕು. ಸರ್ಕಾರಿ, ಖಾಸಗಿ ಕಾಮಗಾರಿಗಳನ್ನು ಆರಂಭಿಸಬೇಕು. ಬಡವರಿಗೆ, ಕಾರ್ಮಿಕರಿಗೆ ಉಚಿತವಾಗಿ ಮಾಸ್ಕ್‌ ವಿತರಿಸಬೇಕು ಎಂದೂ ನಳಿನ್‌ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT