ಬುಧವಾರ, ಫೆಬ್ರವರಿ 19, 2020
29 °C

ನೌಕರರ ಕಡೆಗಣಿಸಿದರೆ ಆಡಳಿತವೇ ಸ್ತಬ್ಧ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: 'ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ರದ್ದುಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಸಿಟ್ಟಿಗೆದ್ದು ನೌಕರರು ತಮ್ಮ ಕೆಲಸ ನಿಲ್ಲಿಸಿದರೆ ಆಡಳಿತ ಯಂತ್ರವೇ ಸ್ತಬ್ಧಗೊಳ್ಳುತ್ತದೆ' ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಎಚ್ಚರಿಸಿದರು.

ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಆಡಳಿತ ನೌಕರರ ಸಂಘದ ರಾಜ್ಯಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.

ಎನ್‌ಪಿಎಸ್‌ಗೆ ಒಳಪಡುವ 2.10 ಲಕ್ಷ ನೌಕರರರು ರಾಜ್ಯದಲ್ಲಿದ್ದಾರೆ. ಇವರೆಲ್ಲರೂ ಎನ್‌ಪಿಎಸ್‌ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮುಂದುವರೆಸಬೇಕು ಎನ್ನುವ ಬೇಡಿಕೆಯನ್ನು ಸರ್ಕಾರಗಳ ಮುಂದೆ ಇಡುತ್ತಲೇ ಬಂದಿದ್ದಾರೆ. ಈಗಿನ ಬಿಜೆಪಿ ಸರ್ಕಾರ ಪ್ರತಿಭಟನೆಗೆ ಅವಕಾಶ ನೀಡದೇ ಬೇಡಿಕೆ ಈಡೇರಿಸುತ್ತದೆ ಎಂಬ ಭರವಸೆಯಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)