ಶನಿವಾರ, ಫೆಬ್ರವರಿ 29, 2020
19 °C
ಜೆಡಿಎಸ್‌ ಪ್ರತಿನಿಧಿಸುವ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಅಭಿಮತ

ಮಂತ್ರಿಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ತಾರೆ: ಶಾಸಕ ಎಸ್‌.ಆರ್‌.ಶ್ರೀನಿವಾಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

SR SRINIVAS

ತುಮಕೂರು: ‘ಮಂತ್ರಿಯಾಗಲೆಂದೇ ಕಾಂಗ್ರೆಸ್ ಮತ್ತು ಜೆಡಿಎಸ್‌ ಬಿಟ್ಟು, ಹೋಗಿ, ಗೆದ್ದಿದ್ದಾರೆ. ಅವರು ಮಂತ್ರಿ ಆಗದಿದ್ದರೆ ಜೀವಹೋಗಿ ಬಿಡುತ್ತದೆ. ಇಲ್ಲವೇ, ಅವರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ’ ಎಂದು ಜೆಡಿಎಸ್‌ ಪ್ರತಿನಿಧಿಸುವ ಗುಬ್ಬಿ ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಅವರು ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಹೇಳಿದರು.

ಸುದ್ದಿಗಾರರೊಂದಿಗೆ ಅವರು ಶುಕ್ರವಾರ ಮಾತನಾಡಿದರು.

‘ಯಡಿಯೂರಪ್ಪ ನಂಬಿಗಸ್ತರು. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ದಿಟ್ಟ ನಾಯಕ. ಅವರಿಗೆ ಈಗ ತಾತ್ಕಾಲಿಕ ಹಿನ್ನಡೆ ಆಗಿರಬಹುದು. ಅವರ ಹೈಕಮಾಂಡ್‌ ಅವರಿಗೆ ಸದ್ಯ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿಲ್ಲದೆ ಇರಬಹುದು. ಆದರೆ, ಯಡಿಯೂರಪ್ಪ ಅವರು ಎಷ್ಟೇ ಕಷ್ಟ ಬಂದರೂ, ಕೊಟ್ಟ ಆಶ್ವಾಸನೆಯನ್ನು ಈಡೇರಿಸುತ್ತಾರೆ’ ಎಂದರು.

‘ಯಡಿಯೂರಪ್ಪ ಅವರಲ್ಲಿ ದಿಟ್ಟ ನಾಯಕತ್ವ ಇದೆ’ ಎಂದು ಹೊಗಳಿದರು.

‘ಬೆಂಗಳೂರಿನಲ್ಲಿ ಜ.23ರಂದು ನಡೆದ ಪಕ್ಷದ ಸಭೆಗೆ ತಡವಾಗಿ ಹೋಗಿದ್ದೆ. ಹಾಗಾಗಿ ವೇದಿಕೆ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿಲ್ಲ. ಇದಕ್ಕೆ ಬೇರೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು