ಫ್ಲೆಕ್ಸ್ ತೆರವು: ಸಹಕರಿಸಲು ಮುಖ್ಯಮಂತ್ರಿ ಮನವಿ 

7

ಫ್ಲೆಕ್ಸ್ ತೆರವು: ಸಹಕರಿಸಲು ಮುಖ್ಯಮಂತ್ರಿ ಮನವಿ 

Published:
Updated:

ಬೆಂಗಳೂರು: ರಾಜ್ಯ ಹೈಕೋರ್ಟ್ ಸೂಚನೆಯಂತೆ ಬೆಂಗಳೂರು ನಗರದಲ್ಲಿ ಫ್ಲೆಕ್ಸ್ ತೆರವು ಕಾರ್ಯಾಚರಣೆಗೆ ಸಹಕರಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಎಲ್ಲ ಪಕ್ಷಗಳ ಮುಖಂಡರನ್ನು ವಿನಂತಿಸಿದ್ದಾರೆ.

‘ಫ್ಲೆಕ್ಸ್‌ ಆಳವಡಿಕೆಯಿಂದ ನಗರದ ಸೌಂದರ್ಯ ಹಾಳಾಗಿರುವುದಲ್ಲದೆ, ಪರಿಸರ ಮಾಲಿನ್ಯವೂ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನ ಸೂಚನೆಯನ್ನು ಪಾಲಿಸಿ, ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಎಲ್ಲ ಪಕ್ಷಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಹಕರಿಸುವಂತೆ ಕೋರಿದ್ದಾರೆ. ಇದಲ್ಲದೆ ಮುಂದಿನ ದಿನಗಳಲ್ಲಿ ಬೆಂಗಳೂರನ್ನು ಫ್ಲೆಕ್ಸ್ ಮುಕ್ತ ನಗರವನ್ನಾಗಿಸಿ, ನಗರದ ಹಳೆಯ ಸೌಂದರ್ಯ ಮರುಕಳಿಸುವಂತೆ ಮಾಡೋಣ’ ಎಂದು ಅವರು ಕರೆ ನೀಡಿದ್ದಾರೆ.

ಅಂತೆಯೇ ಫ್ಲೆಕ್ಸ್ ತೆರವುಗೊಳಿಸುವ ಬಗ್ಗೆ ಹೈಕೋರ್ಟ್‌ನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ನಿರ್ಲಕ್ಯ್ಷ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

 

*

ಬರಹ ಇಷ್ಟವಾಯಿತೆ?

 • 12

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !