ಐಎಂಎ ಜ್ಯುವೆಲ್ಸ್‌ ಹಗರಣ ತನಿಖೆಗೆ ರವಿಕಾಂತೇಗೌಡ ನೇತೃತ್ವದಲ್ಲಿ ಎಸ್‌ಐಟಿ ರಚನೆ 

ಬುಧವಾರ, ಜೂನ್ 26, 2019
29 °C

ಐಎಂಎ ಜ್ಯುವೆಲ್ಸ್‌ ಹಗರಣ ತನಿಖೆಗೆ ರವಿಕಾಂತೇಗೌಡ ನೇತೃತ್ವದಲ್ಲಿ ಎಸ್‌ಐಟಿ ರಚನೆ 

Published:
Updated:

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆಭರಣ ಮಳಿಗೆ ಐಎಂಎ ಸಮೂಹ ಸಂಸ್ಥೆಗಳ ಹಗರಣ ತನಿಖೆಗೆ ರಾಜ್ಯ ಸರ್ಕಾರವೂ ಬುಧವಾರ ಡಿಐಜಿ ಬಿ.ಆರ್‌ ರವಿಕಾಂತೇಗೌಡ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಿ ಆದೇಶ ಹೊರಡಿಸಿದೆ. 

'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್‌ ಹೆಸರಿನಲ್ಲಿ ಆಡಿಯೊವೊಂದನ್ನು ವಾಟ್ಸ್‌ಆ್ಯಪ್‌ನಲ್ಲಿ ಹರಿಬಿಡಲಾಗಿತ್ತು. ಮಾತ್ರವಲ್ಲದೆ, ಶಿವಾಜಿನಗರದಲ್ಲಿರುವ ‘ಐಎಂಎ ಸಮೂಹ ಕಂಪನಿ’ಯ ಪ್ರಧಾನ ಕಚೇರಿ ಇದೇ 5 ರಿಂದ ಬಂದ್‌ ಆಗಿತ್ತು. ಈ  ಹಿನ್ನೆಲೆಯಲ್ಲಿ ಹೂಡಿಕೆದಾರರು ಆತಂಕಗೊಂಡಿದ್ದು, ಹಣಕ್ಕಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ನಡುವೆ ಪ್ರಕರಣದಲ್ಲಿ ಶಾಸಕ ರೋಷನ್‌ ಬೇಗ್‌ ಸೇರಿದಂತೆ ಹಲವು ರಾಜಕಾರಣಿಗಳ ಹೆಸರುಗಳೂ ತಳುಕು ಹಾಕಿಕೊಂಡಿವೆ. ಸಾರ್ವಜನಿಕರನ್ನು ತಲ್ಲಣಗೊಳಿಸಿರುವ ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ತಂಡದಲ್ಲಿ ಯಾರಿದ್ದಾರೆ? 

ತನಿಖಾ ತಂಡದಲ್ಲಿ ಐಪಿಎಸ್‌ ಅಧಿಕಾರಿಗಳಾದ ಎಸ್‌. ಗಿರೀಶ್‌, ಬಾಲರಾಜು, ರವಿಶಂಕರ್‌, ರಾಜ ಇಮಾಮ್‌ ಖಾಸಿಮ್‌, ಪೊಲೀಸ್‌ ಇನ್‌ಸ್ಪೆಕ್ಟರ್‌ಗಳಾದ ಸಿ.ಆರ್‌. ಗೀತಾ, ಎಲ್‌.ವೈ ರಾಜೇಶ್‌, ಅಂಜನ್‌ ಕುಮಾರ್‌, ಎನ್‌. ತನ್ವೀರ್‌ ಅಹ್ಮದ್‌, ಬಿ.ಕೆ. ಶೇಖರ್‌ ಇದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !