ಮಂಗಳವಾರ, ಆಗಸ್ಟ್ 4, 2020
23 °C

‘ಐಎಂಎ ಸಮೂಹ ಕಂಪನಿ’ ವಿವಾದ| ‘ಪ್ರಕರಣ ಸಿಸಿಬಿಗೆ ವಹಿಸಲಾಗಿದೆ’ –ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಐಎಂಎ ಸಮೂಹ ಕಂಪನಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಿಸಿಬಿಗೆ ವಹಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್‌ ಹೆಸರಿನಲ್ಲಿ ಆಡಿಯೊವೊಂದು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಶಿವಾಜಿನಗರದಲ್ಲಿರುವ ‘ಐಎಂಎ ಸಮೂಹ ಕಂಪನಿ’ಯ ಪ್ರಧಾನ ಕಚೇರಿ ಇದೇ 5 ರಿಂದ ಬಂದ್‌ ಆಗಿದೆ.

ಕಂಪೆನಿಯಲ್ಲಿ ಸಾವಿರಾರು ಕೋಟಿ ಮೌಲ್ಯದ ಷೇರು ಹೊಂದಿರುವ ಸಾವಿರಾರು ಹೂಡಿಕೆದಾರರು ಇದರಿಂದ ಆತಂಕಕ್ಕೊಳಗಾಗಿ ಕಚೇರಿ ಎದುರು ಜಮಾಯಿಸಿ ಸೋಮವಾರ ಭಾರಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಐಎಂಎ ಜ್ಯುವೆಲ್ಸ್‌ ಮಾಲೀಕನ ‘ಆತ್ಮಹತ್ಯೆ’ ಆಡಿಯೊ; ಮಳಿಗೆ ಎದುರು ಕೋಲಾಹಲ

ಈ ಸಂಬಂಧ ಮುಖ್ಯಮಂತ್ರಿ ಅವರು ಟ್ವಿಟರ್‌ ಮೂಲಕ, ‘#IMAJewels ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ @MBPatil ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು