ಬುಧವಾರ, ಮಾರ್ಚ್ 22, 2023
26 °C

ಐಎಂಎ ವಂಚನೆ ಪ್ರಕರಣ: ಜಮೀರ್‌, ಬೇಗ್‌ಗೆ ಎಸ್‌ಐಟಿ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಶಾಸಕ ಜಮೀರ್‌ ಅಹಮದ್‌ ಖಾನ್‌ ಮತ್ತು ರೋಷನ್‌ ಬೇಗ್‌ ಅವರಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ನೋಟಿಸ್‌ ಜಾರಿ ಮಾಡಿದೆ.

ಈ ತಿಂಗಳ 29ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತನಿಖಾಧಿಕಾರಿಗಳು ಹೇಳಿದ್ದಾರೆ. ಮನ್ಸೂರ್‌ ಖಾನ್‌ ಅವರ ಜೊತೆ ಇಬ್ಬರೂ ‘ವ್ಯವಹಾರ’ ನಡೆಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಈ ಮಧ್ಯೆ, ಐಎಂಎ ಕಂಪನಿಯ ಲೆಕ್ಕ ಪರಿಶೋಧಕ ಇಕ್ಬಾಲ್‌ ಖಾನ್‌ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಕಂಪನಿಗಳ ರಿಜಿಸ್ಟ್ರಾರ್‌ಗೆ ತಪ್ಪು ಮಾಹಿತಿ ನೀಡಿದ ಆರೋಪ ಆಡಿಟರ್‌ ಮೇಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು