ಶುಕ್ರವಾರ, ಏಪ್ರಿಲ್ 3, 2020
19 °C

ಐಎಂಎ: ಸಿಬಿಐಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: "ಬಹುಕೋಟಿ ವಂಚನೆ ಆರೋಪಕ್ಕೆ ಒಳಗಾಗಿರುವ ಐಎಂಎ ಕಂಪನಿ ಹಗರಣದ ತನಿಖೆಯನ್ನು ಸಿಬಿಐ ವಶಕ್ಕೆ ಒಪ್ಪಿಸಬೇಕು" ಎಂದು ಕೋರಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ನಗರದ ನಿವೃತ್ತ ತೆರಿಗೆ ಅಧಿಕಾರಿ ಇಕ್ಬಾಲ್ ಅಹ್ಮದ್ ಸೇರಿದಂತೆ 17 ಜನ ಹೂಡಿಕೆದಾರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ರಾಜ್ಯ ಸರ್ಕಾರವೂ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

"ಪ್ರಕರಣವನ್ನು ರಾಜ್ಯ ಪೊಲೀಸರು ನಡೆಸಿದರೆ ವಂಚನೆಗೆ ಒಳಗಾಗಿರುವ ಹೂಡಿಕೆದಾರರಿಗೆ ನ್ಯಾಯ ಸಿಗುವುದಿಲ್ಲ. ಇದರಲ್ಲಿ ಹಲವು ಸಚಿವರು ಮತ್ತು ಶಾಸಕರೂ ಭಾಗಿಯಾಗಿದ್ದಾರೆ. ಆದ್ದರಿಂದ ಕೂಡಲೇ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು" ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು