ಭೋವಿ ಜನಾಂಗಕ್ಕೆ ಟಿಕೆಟ್‌ ನೀಡಿ

ಭಾನುವಾರ, ಮೇ 26, 2019
26 °C
ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಕೋರಿಕೆ

ಭೋವಿ ಜನಾಂಗಕ್ಕೆ ಟಿಕೆಟ್‌ ನೀಡಿ

Published:
Updated:
Prajavani

ಚಿತ್ರದುರ್ಗ: ರಾಜ್ಯದ ಐದು ಮೀಸಲು ಲೋಕಸಭಾ ಕ್ಷೇತ್ರದ ಪೈಕಿ ಮೂರು ಕ್ಷೇತ್ರದಲ್ಲಿ ಭೋವಿ ಸಮುದಾಯದ ಸಮರ್ಥ ಅಭ್ಯರ್ಥಿಗೆ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕು ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮನವಿ ಮಾಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿತ್ರದುರ್ಗ, ಕೋಲಾರ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಭೋವಿ ಜನಾಂಗದ ಹಲವರು ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಮುದಾಯದ ಅಭ್ಯರ್ಥಿಗಳಿಗೆ ಪ್ರಾತಿನಿಧ್ಯ ನೀಡಬೇಕು. ಯಾವ ಪಕ್ಷವೂ ಸಮುದಾಯವನ್ನು ಗುರುತಿಸದೇ ಇದ್ದರೆ ಮುಂದಿನ ನಡೆಯ ಬಗ್ಗೆ ತೀರ್ಮಾನಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಸಾಮಾಜಿಕ ನ್ಯಾಯಕ್ಕಾಗಿ ಹಕ್ಕೋತ್ತಾಯ ಮಾಡುವ ಉದ್ದೇಶದಿಂದ ಫೆ.27ರಂದು ರಾಜ್ಯ ಮಟ್ಟದ ಸಿದ್ದರಾಮೇಶ್ವರ ಜಯಂತ್ಯುತ್ಸವವನ್ನು ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ. ಜನಾಂಗದ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮುದಾಯದ ವಿಶ್ವಾಸವನ್ನು ರಾಜಕೀಯ ಪಕ್ಷಗಳು ಹುಸಿ ಮಾಡುವುದಿಲ್ಲ ಎಂಬ ನಂಬಿಕೆ ಇದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !