ಶುಕ್ರವಾರ, ಡಿಸೆಂಬರ್ 6, 2019
21 °C

ಆದಾಯ ತೆರಿಗೆ ಇಲಾಖೆಯಿಂದ ಡಿ.ಕೆ.ಶಿವಕುಮಾರ್‌ಗೆ ಶೋಕಾಸ್‌ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಕಾಂಗ್ರೆಸ್ ಶಾಸಕ  ಡಿ. ಕೆ. ಶಿವಕುಮಾರ್​ ಅವರಿಗೆ ಆದಾಯ ತೆರಿಗೆ (ಐಟಿ) ಇಲಾಖೆ  ಶೋಕಾಸ್​ ನೋಟಿಸ್​ ಜಾರಿ ಮಾಡಿದೆ.

ತೆರಿಗೆ ವಂಚನೆ‌ಗೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.

ಖುದ್ದು ಹಾಜರಾಗಬೇಕು ಅಥವಾ ತಮ್ಮ ಪರವಾಗಿ ಸಂಬಂಧಪಟ್ಟವರು ವಿಚಾರಣೆಗೆ ಹಾಜರಾಗಿ ಉತ್ತರ ನೀಡಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ.

ತೆರಿಗೆ ವಂಚನೆ ಸಂಬಂಧಿಸಿದಂತೆ ದಂಡ ವಿಧಿಸುವ ಕುರಿತು ಈ ನೋಟಿಸ್​ ಜಾರಿ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆ ಕಾಯ್ದೆಯ ಸೆಕ್ಷನ್​ 271(1)ಬಿ ರ ಪ್ರಕಾರ ಈ ನೋಟಿಸ್ ಜಾರಿ ಮಾಡಲಾಗಿದೆ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು