ಶುಕ್ರವಾರ, ನವೆಂಬರ್ 22, 2019
20 °C

ತುಟ್ಟಿಭತ್ಯೆ ಹೆಚ್ಚಿಸಿ ಆದೇಶ

Published:
Updated:

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಶನಿವಾರ (ಅ.19) ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರು ಮೂಲವೇತನದ ಶೇ 6.50ರಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ ಪಡೆಯುತ್ತಿದ್ದರು. ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಶೇ 4.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದರಿಂದಾಗಿ ನೌಕರರಿಗೆ ತಮ್ಮ ಮೂಲವೇತನದ ಶೇ 11.25ರಷ್ಟು ಪ್ರಮಾಣದಲ್ಲಿ ತುಟ್ಟಿಭತ್ಯೆ ಸಿಗಲಿದೆ. 

ತುಟ್ಟಿಭತ್ಯೆಯನ್ನು ನಗದಾಗಿ ನೀಡಬೇಕು ಹಾಗೂ ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು ಅಕ್ಟೋಬರ್‌ ವೇತನಕ್ಕಿಂತ ಮೊದಲೇ ಪಾವತಿ ಮಾಡಕೂಡದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿಕ್ರಿಯಿಸಿ (+)