ಶುಕ್ರವಾರ, ಜೂನ್ 25, 2021
21 °C

ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ ₹ 2 ಏರಿಕೆ, ಫೆಬ್ರುವರಿ 1ರಿಂದ ಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಂದಿನಿ ಹಾಲು ಮತ್ತು ಮೊಸರಿನ ದರ ಲೀಟರ್‌ಗೆ ₹ 2 ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಪರಿಷ್ಕೃತ ದರ ಫೆಬ್ರುವರಿ 1ರಿಂದ ಜಾರಿಗೆ ಬರಲಿದೆ.

ಹೆಚ್ಚಳವಾದ ₹2ರಲ್ಲಿ ₹1 ನೇರವಾಗಿ ರೈತರಿಗೆ ಸೇರಲಿದೆ. 40 ಪೈಸೆ ಹಸುಗಳ ವಿಮೆ ಮಾಡಿಸಲು ರೈತರಿಗೇ ನೀಡಲಾಗುತ್ತದೆ. ಹಾಲು ಮಾರಾಟ ಮಾಡುವವರಿಗೆ ಕಮಿಷನ್ ರೂಪದಲ್ಲಿ 40 ಪೈಸೆ ಸೇರಲಿದೆ. ಉಳಿದ 20 ಪೈಸೆ ಹಾಲು ಸಹಕಾರ ಸಂಘಗಳಲ್ಲಿ ಕೆಲಸ ಮಾಡುವವರಿಗೆ ಪ್ರೊತ್ಸಾಹಧನವಾಗಿ ನೀಡಲು ನಿರ್ಧರಿಸಲಾಗಿದೆ ಎಂದು ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ್‌ ‘ಪ‍್ರಜಾವಾಣಿ’ಗೆ ತಿಳಿಸಿದರು.

‘ಮೂರು ವರ್ಷಗಳಿಂದ ದರ ಏರಿಕೆ ಮಾಡಿಲ್ಲ. ಹೀಗಾಗಿ, ದರದಲ್ಲಿ ₹2ರಿಂದ ₹3 ಹೆಚ್ಚಳ ಮಾಡಬೇಕು’ ಎಂಬ ಪ್ರಸ್ತಾವವನ್ನು 14 ಒಕ್ಕೂಟಗಳು ಕೆಎಂಎಫ್‌ಗೆ ಸಲ್ಲಿಸಿದ್ದವು. ದರ ಹೆಚ್ಚಳಕ್ಕೆ ಕೆಎಂಎಫ್ ಆಡಳಿತ ಮಂಡಳಿಯೂ ಒಪ್ಪಿಗೆ ನೀಡಿತ್ತು. ಮುಖ್ಯಮಂತ್ರಿ ಅವರೂ ಇದೀಗ ಒಪ್ಪಿಗೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು