ಬುಧವಾರ, ಆಗಸ್ಟ್ 4, 2021
23 °C

ಬೆಳಗಾವಿ | ಕೃಷ್ಣಾ ನದಿ ಹರಿವು ಹೆಚ್ಚಳ; ಏಳು ಬ್ಯಾರೇಜ್‌ ಜಲಾವೃತ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು,  ಕೃಷ್ಣಾ ನದಿ ನೀರಿನ ಹರಿವು ಏರಿಕೆಯಾಗಿದೆ. ಜಿಲ್ಲೆಯ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ ಏಳು ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಜಲಾವೃತವಾಗಿವೆ.

ದೂಧ್‌ಗಂಗಾ ನದಿಯಿಂದ15,488 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ46,750 ಕ್ಯುಸೆಕ್ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 62,228 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಚಿಕ್ಕೋಡಿ ತಾಲ್ಲೂಕಿನ ಕೃಷ್ಣಾ ನದಿಯ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಮಲಿಕವಾಡ-ದತ್ತವಾಡ, ನಿಪ್ಪಾಣಿ ತಾಲ್ಲೂಕಿನ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾರದಗಾ-ಭೋಜ, ವೇದಗಂಗಾ ನದಿಗೆ ಅಡ್ಡಲಾಗಿರುವ ಬಾರವಾಡ- ಕುನ್ನೂರ,  ಕೊನ್ನೂರ-ಭೋಜವಾಡಿ, ಅಕ್ಕೋಳ- ಸಿದ್ನಾಳ, ಜತ್ರಾಟ- ಭೀವಶಿ ಸೇತುವೆಗಳು ಜಲಾವೃತಗೊಂಡಿವೆ. ಈ ಗ್ರಾಮಗಳಿಗೆ ಪರ್ಯಾಯ ರಸ್ತೆ ಸಂಪರ್ಕವಿದ್ದು, ಜನ ಸಂಚಾರಕ್ಕೆ ತೊಂದರೆಯಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು