ಮಂಗಳವಾರ, ಆಗಸ್ಟ್ 3, 2021
23 °C

ಕೆಲಸದ ಅವಧಿ ಹೆಚ್ಚಳ: ಅಧಿಸೂಚನೆ ಹಿಂದಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಕಾರ್ಮಿಕರ ದಿನದ ಕೆಲಸದ ಅವಧಿಯನ್ನು 9 ತಾಸುಗಳಿಂದ 10 ತಾಸುಗಳಿಗೆ ಹೆಚ್ಚಿಸಿ ಮೇ 22ರಂದು ಹೊರಡಿಸಿದ್ದ ಅಧಿಸೂಚನೆ ಹಿಂಪಡೆಯಲಾಗಿದೆ' ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಅಧಿಸೂಚನೆ ರದ್ದುಪಡಿಸುವಂತೆ ಕೋರಿ ದೀಪಾಂಜಲಿ ನಗರದ ನಿವಾಸಿ ಎಚ್. ಮಾರುತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಅಧಿಸೂಚನೆ ಹಿಂಪಡೆದಿರುವ ಕುರಿತಂತೆ ಕಾರ್ಮಿಕ ಇಲಾಖೆ ಉಪ ಕಾರ್ಯದರ್ಶಿಗಳ ಆದೇಶದ ಪ್ರತಿಯನ್ನು ಮೆಮೊ ಮೂಲಕ ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.