ಚಿಕಿತ್ಸೆಗೆ ಶಾಸಕರು, ಸಂಸದ ಹಾಗೂ ಸಚಿವರಿಂದ ವೈಯಕ್ತಿಕ ಸಹಾಯ

7
ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಚಿಕಿತ್ಸೆಗೆ ಶಾಸಕರು, ಸಂಸದ ಹಾಗೂ ಸಚಿವರಿಂದ ವೈಯಕ್ತಿಕ ಸಹಾಯ

Published:
Updated:

ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿ ಗ್ರಾಮದ ಕಿಚ್‌ಕುತ್ ಮಾರಮ್ಮ ದೇವಾಲಯದ ಗೋಪುರ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶುಕ್ರವಾರ ನೀಡಲಾದ ಪ್ರಸಾದ (ತರಕಾರಿ ಬಾತ್‌) ಸೇವಿಸಿ ಮೃತಪಟ್ಟವರ ಸಂಬಂಧಿಕರು ಮತ್ತು ಅಸ್ವಸ್ಥರಾದವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಶನಿವಾರ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಸಂಸದ ಆರ್. ಧ್ರುವನಾರಾಯಣ ಸಹ ಇದ್ದರು. ಮೃತರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ ತಲಾ ₹50,000 ನೀಡುವುದಾಗಿ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಈವರೆಗೆ ಒಟ್ಟು 94 ಅಸ್ವಸ್ಥರಿಗೆ‌ ಚಿಕಿತ್ಸೆ ನೀಡಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದವರನ್ನು ತುರ್ತಾಗಿ ಮೈಸೂರಿಗೆ ಕಳಿಸಲಾಯಿತು. ಈಗ ಕೊಳ್ಳೇಗಾಲ ಮತ್ತು ಕಾಮಗೆರೆ ಆಸ್ಪತ್ರೆಯಲ್ಲಿ ಈಗ ಯಾವ ರೋಗಿಗಳೂ ಇಲ್ಲ. ಎಲ್ಲರನ್ನೂ ಮೈಸೂರಿಗೆ ಕಳುಹಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದರು.

ಮೈಸೂರಿನ ಏಳೆಂಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 23 ಜನರು ಇನ್ನೂ ಗಂಭೀರ ಸ್ಥಿತಿಯಲ್ಲಿಯೇ ಇದ್ದಾರೆ. ಪ್ರಕರಣದ ಬಗ್ಗೆ ಉನ್ನತ ತನಿಖೆಯ ಅಗತ್ಯವಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದರು. ‘ತನಿಖೆ ಪ್ರಗತಿಯಲ್ಲಿದೆ. ಈಗಲೇ ಏನೂ ಹೇಳಲು ಸಾಧ್ಯವಿಲ್ಲ’ ಎಂದು ಶಾಸಕ ಆರ್. ನರೇಂದ್ರ ಪ್ರತಿಕ್ರಿಯಿಸಿದರು.

ಮೃತರ ಕುಟುಂಬ ಮತ್ತು ಅಸ್ವಸ್ಥರ ಚಿಕಿತ್ಸೆಗೆ ವೈಯಕ್ತಿಕವಾಗಿ ಸಹಾಯ ಮಾಡುವುದಾಗಿ ಶಾಸಕರು, ಸಂಸದರು ಹಾಗೂ ಸಚಿವರು ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 14

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !