ಭಾನುವಾರ, ಏಪ್ರಿಲ್ 11, 2021
32 °C

ತುಂಗಭದ್ರೆಗೆ ನೀರು ಬರಲು ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಮಳೆಗಾಲ ಆರಂಭಗೊಂಡ ಒಂದು ತಿಂಗಳ ಬಳಿಕ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರಲಾರಂಭಿಸಿದೆ.

ಸದ್ಯ ಜಲಾಶಯಕ್ಕೆ 14,911 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಒಂದು ಟಿ.ಎಂ.ಸಿ. ಅಡಿಗೂ ಅಧಿಕ ನೀರು ಅಣೆಕಟ್ಟೆಗೆ ಹರಿದು ಬಂದಿದೆ. 3.06 ಟಿ.ಎಂ.ಸಿ. ಅಡಿ ನೀರು ಸದ್ಯ ಜಲಾಶಯದಲ್ಲಿ ಇದೆ. ಹಿಂದಿನ ವರ್ಷ ಇದೇ ದಿನ 42.90 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು.

‘ಶಿವಮೊಗ್ಗದ ಗಾಜನೂರು ಸಮೀಪದ ತುಂಗಾ ಜಲಾಶಯದಿಂದ ನೀರು ಬಿಡಲಾಗುತ್ತಿದೆ. ಸೋಮವಾರ ರಾತ್ರಿ ಮೂರು ಸಾವಿರ ಕ್ಯುಸೆಕ್‌ ಇದ್ದ ಒಳಹರಿವು ಮಂಗಳವಾರ 14 ಸಾವಿರ ಕ್ಯುಸೆಕ್‌ಗೂ ಅಧಿಕವಾಗಿದೆ. ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು