ಸೋಮವಾರ, ಸೆಪ್ಟೆಂಬರ್ 20, 2021
24 °C

ಮಾಹಿತಿ ಆಯುಕ್ತರ ಅಧಿಕಾರ ಸ್ವೀಕಾರ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎನ್‌.ಸಿ.ಶ್ರೀನಿವಾಸ್‌, ಮಾಹಿತಿ ಆಯುಕ್ತರಾಗಿ ಎಸ್‌.ಎಂ.ಸೋಮಶೇಖರ್‌ ಹಾಗೂ ಕೆ.ಪಿ.ಮಂಜುನಾಥ್‌ ಸೋಮವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯ ಸರ್ಕಾರ ಮಾರ್ಚ್‌ 23ರಂದು ಆಯುಕ್ತರ ನೇಮಕ ಮಾಡಿತ್ತು. ಕೋರ್ಟ್‌ಗೆ ಅಡ್ವೊಕೇಟ್‌ ಜನರಲ್‌ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿ ಈ ನೇಮಕ ಪ್ರಕ್ರಿಯೆ ನಡೆಸಲಾಗಿದೆ ಎಂದು ನಿವೃತ್ತ ಪೊಲೀಸ್‌ ಅಧಿಕಾರಿ ಮೊಹಮ್ಮದ್‌ ವಜೀರ್‌ ಅಹ್ಮದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.
ಈ ನೇಮಕ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಬಳಿಕ ತಡೆಯಾಜ್ಞೆ ತೆರವಾಗಿತ್ತು.

ರಾಜಭವನದಲ್ಲಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆಯುಕ್ತರಿಗೆ ಪ್ರಮಾಣವಚನ ಬೋಧಿಸುವರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು