ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಐಎನ್‌ಎಸ್‌ ಹಡಗಿನ ಚಿತ್ರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ‘ಸುವರ್ಣ ತ್ರಿಭುಜ ಬೋಟ್‌ ದುರಂತಕ್ಕೆ ಹಾಗೂ ಮೀನುಗಾರರ ಸಾವಿಗೆ ಕಾರಣವಾದ ನೌಕಾದಳದ ಬೃಹತ್ ಯುದ್ಧನೌಕೆ ಐಎನ್‌ಎಸ್‌ ಕೊಚ್ಚಿನ್‌ ಹಡಗಿನ ತಳಭಾಗಕ್ಕೆ ಹಾನಿಯಾಗಿರುವ ಚಿತ್ರ ಲಭ್ಯವಾಗಿದೆ’ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಮಾಜಿಕ ಜಾಲತಾಣದಲ್ಲಿ ಫೋಟೊ ಹಾಕಿದ್ದಾರೆ.‌

‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಲೋಕಸಭಾ ಚುನಾವಣೆಗೂ ಮೊದಲೇ ಬೋಟ್‌ ಅವಘಡದ ಮಾಹಿತಿ ಸಿಕ್ಕಿದ್ದರೂ ರಕ್ಷಣಾ ಇಲಾಖೆ ಹಾಗೂ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಮರೆಮಾಚುವ ಪ್ರಯತ್ನ ಮಾಡಿದ್ದಾರೆ’ ಎಂದು ಪ್ರಮೋದ್ ಟೀಕಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು