ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಇಂಟೆಲ್ ಉದ್ಯೋಗಿಗೆ ಕೊರೊನಾ ಶಂಕೆ

Last Updated 4 ಮಾರ್ಚ್ 2020, 7:32 IST
ಅಕ್ಷರ ಗಾತ್ರ

ಬೆಂಗಳೂರು: ಇಂಟೆಲ್ ಕಂಪನಿಯ ಬೆಂಗಳೂರಿನ ಉದ್ಯೋಗಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು (ಕೋವಿಡ್‌19) ತಗುಲಿರುವ ಶಂಕೆ ವ್ಯಕ್ತವಾಗಿದೆ.

ಉದ್ಯೋಗಿಯನ್ನು ಪ್ರತ್ಯೇಕವಾಗಿ ಇರಿಸಿ ನಿಗಾವಹಿಸಲಾಗಿದೆ. ಕಚೇರಿಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿಯು ಮಂಗಳವಾರ ತಡರಾತ್ರಿ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಚೇರಿಯಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳಲು ಹೆಚ್ಚು ಆದ್ಯತೆ ನೀಡಲಾಗಿದೆ. ಭಾರತದಾದ್ಯಂತ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು (ವರ್ಕ್‌ ಫ್ರಂ ಹೋಮ್) ಅನುವು ಮಾಡಿಕೊಡಲಾಗಿದೆ ಎಂದು ಕಂಪನಿ ತಿಳಿಸಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಅವರು ಹೈದರಾಬಾದ್‌ಗೆ ತೆರಳಿದ ಬಳಿಕ ಪತ್ತೆಯಾಗಿತ್ತು.ದುಬೈನಿಂದ ವಾಪಸಾಗಿದ್ದ ಅವರು ಎರಡು ದಿನ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದರು. ಅದಾದ ಬಳಿಕ, 10 ದಿನಗಳ ಹಿಂದೆ ಕುಟುಂಬದ ಭೇಟಿಗಾಗಿ ಹೈದರಾಬಾದ್‌ಗೆ ತೆರಳಿದಾಗ ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

ಜಾಗತಿಕವಾಗಿ ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬಲಿಪಡೆದಿರುವ ಕೊರೊನಾ ವೈರಸ್ ಸೋಂಕು ಭಾರತದಲ್ಲಿಯೂ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಂಗಳವಾರದವರೆಗೆ 6 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ಭಾರತಕ್ಕೆ ಬಂದಿರುವ 15 ಮಂದಿ ಇಟಲಿ ಪ್ರವಾಸಿಗರಲ್ಲಿ ಸೋಂಕು ಇರುವುದು ಇಂದು (ಬುಧವಾರ) ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT