ಬೆಂಗಳೂರು: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವುದರ ಜತೆಗೆ ಶಾಂತಿ ಮತ್ತು ಸೌಹಾರ್ದಕ್ಕೆ ಭಂಗ ತರುವ ಸಾಮಾಜಿಕ ಜಾಲತಾಣಗಳ ದುರುಪಯೋಗವನ್ನು ತಡೆಗಟ್ಟುವ ಉದ್ದೇಶದಿಂದ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಡಾ.ರಜನೀಶ್ ಗೋಯೆಲ್ ಅಧಿಸೂಚನೆ ಹೊರಡಿಸಿದ್ದು, ‘ಟೆಲಿಕಾಂ ಸೇವಾ ನಿಯಮಗಳ ಪ್ರಕಾರ ಎಲ್ಲಾ ಮೊಬೈಲ್ ಸೇವಾ ಪೂರೈಕೆದಾರರ ಮೊಬೈಲ್ ಇಂಟರ್‌ನೆಟ್ ಡೇಟಾ ಸೇವೆಯನ್ನು ಗುರುವಾರ ರಾತ್ರಿ 10 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ನಿಷೇಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಗುರುವಾರ ಸಂಜೆ ಮಂಗಳೂರಿನಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸುವ ಮನವಿಯನ್ನು ರಾಜ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.