ಶನಿವಾರ, ಏಪ್ರಿಲ್ 17, 2021
24 °C

ಅತೃಪ್ತ ಶಾಸಕರ ಅರ್ಜಿ ವಿಚಾರಣೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜೀನಾಮೆ ಕುರಿತು ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ 10 ಜನ ಅತೃಪ್ತ ಶಾಸಕರು ಸಲ್ಲಿಸಿದ್ದ ಮೇಲ್ಮನವಿಯೊಂದಿಗೆ ಇತರ ಐವರು ಶಾಸಕರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿ ಸೂಚಿಸಿದ್ದು, ಮಂಗಳವಾರ ವಿಚಾರಣೆ ನಡೆಯಲಿದೆ.

ರಾಜೀನಾಮೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ಸ್ಪೀಕರ್ ಕೆ.ಆರ್‌. ರಮೇಶಕುಮಾರ್‌ ಅವರಿಗೆ ಸೂಚಿಸಬೇಕು ಎಂದು ಶಾಸಕರಾದ ಆನಂದ್‌ ಸಿಂಗ್‌, ಕೆ.ಸುಧಾಕರ್, ರೋಷನ್‌ ಬೇಗ್‌, ಎಂಟಿಬಿ ನಾಗರಾಜ್‌ ಮತ್ತು ಮುನಿರತ್ನ ಕಳೆದ ಶನಿವಾರ ಮೇಲ್ಮನವಿ ಸಲ್ಲಿಸಿದ್ದರು.

ಈಗಾಗಲೇ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ ಇತರ 10 ಜನ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯೊಂದಿಗೆ ಈ ಅರ್ಜಿಯನ್ನೂ ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ಸೋಮವಾರ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ‌ದ ಎದುರು ಮನವಿ ಮಾಡಿದರು. ಮಂಗಳವಾರದ ವಿಚಾರಣೆ ವೇಳೆ ಈ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸಮ್ಮತಿ ನೀಡಿತು.

ರಾಜೀನಾಮೆ ಮತ್ತು ಅನರ್ಹತೆ ಪ್ರಕರಣಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕಳೆದ ಶುಕ್ರವಾರವೇ ಆದೇಶ ನೀಡಿದ್ದ ನ್ಯಾಯಪೀಠ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು