ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

7
scholarships

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Published:
Updated:

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್‌ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ.

ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ವೃತ್ತಿ ಶಿಕ್ಷಣ, ಕಾನೂನು, ಮ್ಯಾನೇಜ್‌ಮೆಂಟ್ ಕೋರ್ಸ್‌ಗಳಿಗೆ 2018-19ನೇ ಶೈಕ್ಷಣಿಕ ಅವಧಿಗೆ ಪ್ರವೇಶ ಪಡೆದಿರುವ ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಮಕ್ಕಳೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಯಾ ಶಾಲಾ ಕಾಲೇಜಿನ ಮುಖ್ಯಸ್ಥರ ಮೂಲಕ ಕ್ರಮಬದ್ಧ ಪ್ರಮಾಣ
ಪತ್ರಗಳೊಂದಿಗೆ ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್‌ ಮೂಲಕ ಸಲ್ಲಿಸಲು ಮತ್ತು ವಿವರಗಳಿಗೆ ಜಾಲತಾಣ: www.ssjanakalyantrust.org ನೋಡಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ಕಚೇರಿ, c/o ಆರ್.ಎಲ್. ಕಾನೂನು ಕಾಲೇಜು, ಪಿ.ಜೆ. ಬಡಾವಣೆ, 2ನೇ ಮುಖ್ಯರಸ್ತೆ, ದಾವಣಗೆರೆ; ಈ ವಿಳಾಸಕ್ಕೆ ಸಲ್ಲಿಸಬಹುದು ಎಂದು ಟ್ರಸ್ಟ್‌ನ ಕಾರ್ಯದರ್ಶಿ ಅಥಣಿ ವೀರಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !