ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್: ಮಾ.28ರಂದು ಬೆಂಗಳೂರಿನಲ್ಲಿ ಮುಂಬೈ ಇಂಡಿಯನ್ಸ್‌-ಆರ್‌ಸಿಬಿ ಸೆಣಸಾಟ

Last Updated 19 ಫೆಬ್ರುವರಿ 2019, 20:16 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಮಾರ್ಚ್‌ 23ರಿಂದ ಆರಂಭವಾಗಲಿದ್ದು, ಮೊದಲ ಹಂತದ 17 ಪಂದ್ಯಗಳ ವೇಳಾಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್ ಐದರವರೆಗೆ ನಡೆಯುವ ಪಂದ್ಯಗಳ ವೇಳಾಪಟ್ಟಿ ಇದಾಗಿದೆ.

ಸಂಸತ್ ಚುನಾವಣೆ ವೇಳಾಪಟ್ಟಿ ಘೋಷಣೆಯ ನಂತರ ಇನ್ನುಳಿದ ಪಂದ್ಯಗಳ ಮಾಹಿತಿಯನ್ನು ಬಿಡುಗಡೆ ಮಾಡಲು ಐಪಿಎಲ್‌ ಆಡಳಿತ ಮಂಡಳಿಯು ನಿರ್ಧರಿಸಿದೆ.

ಮೊದಲ ಹಂತದಲ್ಲಿ ಎರಡು ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಮಾರ್ಚ್‌ 28 ರಂದು ಆತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್‌ ತಂಡವನ್ನು; ಏಪ್ರಿಲ್‌ 5ರಂದು ಕೋಲ್ಕತ್ತ ನೈಟ್‌ರೈಡರ್ಸ್‌ ತಂಡವನ್ನು ಎದುರಿಸಲಿದೆ.

ಐಪಿಎಲ್ ಟೂರ್ನಿ ಮೇ ಎರಡನೇ ವಾರದಲ್ಲಿ ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT